ಉಡುಪಿ:ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಾವತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿ, 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ (ಮರಣ ಹೊಂದಿರುವ ಹಾಗೂ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ) ಪರಿಪಕ್ವ ಮೊತ್ತ ರೂ. 32,351 ಅನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3405 ಫಲಾನುಭವಿಗಳನ್ನು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಕೆಲವು ಫಲಾನುಭವಿಗಳುವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು ತಡವಾಗಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಅರ್ಹ ಫಲಾನುಭವಿಗಳಮಾಹಿತಿಯನ್ನು […]
ಉಡುಪಿ:ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ.ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ರ […]
ಉಡುಪಿ:ಪಿ.ಎಂ.ಇ.ಜಿ.ಪಿ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ 18 ವರ್ಷ ಮೇಲ್ಪಟ್ಟ ಯುವಕ ಹಾಗೂ ಯುವತಿಯರಿಂದ ವೆಬ್‌ಸೈಟ್ https://www.kviconline.gov.in/pmegpeportal/jsp/pmegponline.jsp ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ 50 ಲಕ್ಷ ರೂ. ಉತ್ಪಾದನಾ ಚಟುವಟಿಕೆ ಮತ್ತು 20 ಲಕ್ಷ ರೂ. ಆಯ್ದ ಸೇವಾ […]