ಸೆ.5ರಂದು ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಸ್ತನ ಕ್ಯಾನ್ಸರ್ ಮಹಿಳೆಯರ ಪ್ರಮುಖ ಆರೋಗ್ಯ ಸಮಸ್ಯೆ ಹಾಗೂ ಕಾಳಜಿಗಳಲ್ಲಿ ಒಂದಾಗಿ ಮುಂದುವರೆದಿದೆ, ಆದರೆ ಸಮಯಕ್ಕೆ ಸರಿಯಾಗಿ ಪತ್ತೆಹಚ್ಚುವುದು ಮತ್ತು ಸರಿಯಾದ ಅರಿವು ಮುಖ್ಯವಾಗಿದೆ. ಈ ಉದ್ದೇಶವನ್ನು ಬಲಪಡಿಸಲು, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸೆ. 5ರಂದು ಉಚಿತ ಸ್ತನ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಆಯೋಜಿಸಿತ್ತಿದೆ. ಈ ಉಪಕ್ರಮವು ಮಹಿಳೆಯರಿಗೆ, ವಿಶೇಷವಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು, […]

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 3ರಂದು ಓಣಂ ಹಬ್ಬವನ್ನು ಸಂಭ್ರಮದಿಂದ ಹಾಗೂ ಸಾಂಸ್ಕೃತಿಕ ಹೆಮ್ಮೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಒಟ್ಟಾಗಿ ಪಾಲ್ಗೊಂಡು ಹಬ್ಬವನ್ನು ಉತ್ಸಾಹಭರಿತವಾಗಿ ನಡೆಸಿದರು. ಕಾರ್ಯಕ್ರಮವನ್ನು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನಿಫರ್ ಫ್ರೀಡಾ ಮೆನೆಜ ಸ್ ಅವರಿಂದ ದೀಪ ಪ್ರಜ್ವಲನದೊಂದಿಗೆ ಆರಂಭಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಪ್ರದಾಯಿಕ ತಿರುವಾತಿರ ನೃತ್ಯ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು. ಈ ನೃತ್ಯವು ಕೇರಳದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸುಂದರವಾಗಿ ಪ್ರತಿಬಿಂಬಿಸಿತು. ನಂತರ ಪ್ರೇಕ್ಷಕರನ್ನು ಆಕರ್ಷಿಸಿದ ಮನರಂಜನಾತ್ಮಕ […]

ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ನಡೆಯಿತು. ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಒಂದು ಸಂಘಟಿತ ಸಂಸ್ಥೆಯ ಮೂಲಕ ಯಾವುದೇ ವೃತ್ತಿಗೆ ಗೌರವ ಸಲ್ಲಿಸಬಹುದಾಗಿದೆ. ಅಸೋಸಿಯೇಷನ್ ಸ್ಥಾಪಿಸಿ ಅದರ ಮೂಲಕ ತಾವು ಎದುರಿಸುವ ಸಮಸ್ಯೆ, ಸವಾಲುಗಳನ್ನು ಕೊನೆಗಾಣಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮೊಬೈಲ್ ರೀಟೇಲರ್ಸ್ ಗಳು ಒಗ್ಗೂಡಿ ಸ್ಥಾಪಿಸಿರುವ ಮೊಬೈಲ್ ರಿಟೇಲರ್ಸ್ ಅಸೋಸಿಯೇಷ್ ಅವರ ಎಲ್ಲ ಸಮಸ್ಯೆ, […]

ಜಿಎಸ್‌ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನಸಾಮಾನ್ಯರಿಗೆ ನವರಾತ್ರಿಯ ಹೊಸ ಬೆಳಕು – ಶ್ರೀನಿಧಿ ಹೆಗ್ಡೆ

ಉಡುಪಿ: ನಾಲ್ಕು ಸ್ಲಾಬ್ ಗಳಲ್ಲಿದ್ದ ಜಿ.ಎಸ್.ಟಿ ತೆರಿಗೆ ಮಿತಿಯನ್ನು ಎರಡು ಸ್ಲಾಬ್ ಮಾಡುವ ಮೂಲಕ ಔಷಧಿ, ಜೀವವಿಮೆಯೂ ಸೇರಿದಂತೆ ಹಲವು ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದೆ. ಈ ಮೂಲಕ ದೇಶದ ಆರ್ಥಿಕ ಇತಿಹಾಸದಲ್ಲಿ ಮಹತ್ವದ ತಿರುವು ಮೂಡಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ಇದು ದೇಶದ ಸಾಮಾನ್ಯ ಜನ, ಮಧ್ಯಮ ವರ್ಗ, ರೈತರು ಹಾಗೂ ವ್ಯಾಪಾರಿಗಳ ಜೀವನದಲ್ಲಿ ಹಾಗೂ ದೇಶದ ಆರ್ಥಿಕತೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ […]

ಕಾರ್ಕಳ ಕ್ರೈಸ್ಟ್ ಕಿಂಗ್: ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಜನತಾ ಪ.ಪೂ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮ ಪ್ರಭು ಪ್ರಥಮಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇದೇ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಡಿಮೆಲ್ಲೊ ದ್ವಿತೀಯ, ಡೇನಿಕಾ ಕುಂದರ್ ತೃತೀಯ, ದ್ವಿತೀಯ ವಾಣಿಜ್ಯ ವಿಭಾಗದ ಅಪೂರ್ವ ತೃತೀಯ, […]