ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ; 19ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆ.30ರಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 19ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2024-25 ಲಭಿಸಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸೊಸೈಟಿಯ […]

ಮಣಿಪಾಲ ಜ್ಞಾನಸುಧಾದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭ ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್‍ನ ಅಂತರಾಷ್ಟ್ರೀಯ ನಿರ್ಣಾಯಕರಾದ ಶ್ರೀರಾಮ್ ಕೌಡೂರು, ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಜೊತೆ ಜೊತೆಗೆ ನಿರ್ದಿಷ್ಟ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವದರಿಂದ ಹವ್ಯಾಸವಾಗಿ ಜೀವನದುದ್ದಕ್ಕೂ ಶಿಸ್ತು ಬದ್ಧತೆಗೆ, ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು. ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆಯ […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಶಿಫಾನ್ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಸೆಪ್ಟೆಂಬರ್ 01 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡದಲ್ಲಿ ಪ್ರತಿನಿಧಿಸಿದ ವಿದ್ಯಾರ್ಥಿ ಶಿಫಾನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ […]

ಮಿಜಾರು ಆಳ್ವಾಸ್ ಕಾಲೇಜು: ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಬೆಳವಣಿಗೆಯಿಂದ ಸಂವೇದನಾಶೀಲ ಜ್ಞಾನ ಅಥವಾ ಸೂಚ್ಯ ಜ್ಞಾನದ ಬಳಕೆ ಕ್ಷೀಣಿಸುತ್ತಿರುವ ಆತಂಕಕಾರಿ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೋ ಶರತ್ ಅನಂತಮೂರ್ತಿ ನುಡಿದರು. ಅವರು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 2025-26 ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ- ಸ್ವಾಗತ ಕಾರ‍್ಯಕ್ರಮ ‘ಆಳ್ವಾಸ್ ಆಗಮನ’ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮೇಲೆ ಸಂಪೂರ್ಣ ಅವಲಂಬನೆಯಾದರೆ ಮನುಷ್ಯನ ಅನುಭವದಿಂದ ಕಲಿಯುವ ಶಕ್ತಿ, ಪ್ರಶ್ನಿಸುವ ಸ್ವಭಾವ, ಆಳವಾದ ಚಿಂತನೆ ಸೃಜಿಸಲಾರದು. ಎಐ […]

ಉಡುಪಿ: ಪಾರ್ಟ್ ಟೈಮ್ ಕೆಲಸಕ್ಕೆ ಜನ ಬೇಕಾಗಿದ್ದಾರೆ.

ಉಡುಪಿ: ಪಾರ್ಟ್ ಟೈಮ್ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಆಸಕ್ತರು ದ್ವಿಚಕ್ರವಾಹನ ಹಾಗೂ ಲೈಸೆನ್ಸ್ ಹೊಂದಿರಬೇಕು.ಸಮಯ: ಬೆಳಿಗ್ಗೆ 4 ರಿಂದ 7 ರವರೆಗೆ. ಉಡುಪಿಯ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9880605540