ಜಿಎಸ್ ಟಿ ಸ್ಲ್ಯಾಬ್ ಗಳಲ್ಲಿ ಮಹತ್ತರ ಬದಲಾವಣೆ: ಇನ್ನು ಎರಡು ತೆರಿಗೆ ಮಾತ್ರವೆಂದ ಕೇಂದ್ರ!

ನವದೆಹಲಿ: ದೇಶದ ಜನತೆಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಂಡಳಿಯು ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಬುಧವಾರ ಅನುಮೋದನೆ ನೀಡಿದೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ. ಜಿಎಸ್ ಟಿ ಸ್ಲ್ಯಾಬ್’ಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಪ್ರಸ್ತುತ, ನಾಲ್ಕು ಜಿಎಸ್ ಟಿ ಸ್ಲ್ಯಾಬ್‌ಗಳಿದ್ದು, ಶೇ. 5, ಶೇ, […]

ಉಡುಪಿ:ಭಾರತೀಯ ಸೇನಾ ಆಯ್ಕೆಗೆ ಪೂರ್ವ ಸಿದ್ಧತಾ ತರಬೇತಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ /ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಅಭ್ಯರ್ಥಿಯು 2005 ರ ಸೆಪ್ಟಂಬರ್ […]

ಉಡುಪಿ:ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಎಂದು ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತೆಲಂಗಾಣ ಹೈದರಾಬಾದ್ ಮೂಲದ ಕುಟುಂಬಕ್ಕೆ ಮಗುವನ್ನು ದತ್ತು ಆದೇಶ ನೀಡಿ ಮಾತನಾಡುತ್ತಿದ್ದರು. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61 ರ ಅಡಿಯಲ್ಲಿ […]

ಉಡುಪಿ:ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಸೆಪ್ಟಂಬರ್ 5 ರಂದು ಬೆಳಗ್ಗೆ 9.30 ಕ್ಕೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ […]