ಅತ್ಯಾಚಾರ ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಗೆ ಹೈಕೋರ್ಟ್ ಜಾಮೀನು

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಬಂಧಿತನಾಗಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ (21) ಗೆ ಹೈಕೋರ್ಟ್ ಬುಧವಾರ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಗುರುವಾರ ಜೈಲಿನಿಂದ ಬಿಡುಗಡೆ ಪ್ರಕ್ರಿಯೆ ನಡೆದಿದೆ. ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಜು.5 […]
ಉಡುಪಿ: ಆನ್‌ಲೈನ್ ಟ್ರೇಡಿಂಗ್ ಆ್ಯಪ್‌ನಲ್ಲಿ ವಂಚನೆ; 1.32 ಕೋಟಿ ರೂ. ಕಳೆದುಕೊಂಡ ವ್ಯಕ್ತಿ.

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಿರಿಯ ನಾಗರಿಕರೊಬ್ಬರಿಗೆ 1.32 ಕೋ. ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ’ಅಲ್ಮೇಡಾ (69) ಹಣ ಕಳೆದುಕೊಂಡವರು.ಹೆನ್ರಿ ಡಿ’ಅಲ್ಮೇಡಾ ಅವರು ಜು. 19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್‌ಮೆಂಟ್ ಟ್ರೇಡಿಂಗ್ ಮಾಡುವ ಬಗ್ಗೆ ಜಾಹೀರಾತೊಂದು ಕಾಣಿಸಿದ್ದು ಅದನ್ನು ತೆರೆದು ನೋಡಿದ್ದರು. ಬಳಿಕ ಹೆನ್ರಿ ಅವರ ವಾಟ್ಸ್‌ಆ್ಯಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿತ್ತು. ಅಂಕಿತಾ […]
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ

ಉಡುಪಿ: ಉಡುಪಿಯ ಹೋಟೆಲ್ ಮಧುರ ಕಂಫರ್ಟ್ಸ್ ಸಭಾಂಗಣದಲ್ಲಿ ಸೆಪ್ಟೆಂಬರ್ 2ರಂದು ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಪ್ರಭಾವತಿ ವಿ. ಶೆಣೈ, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ , ವಿಘ್ನೇಶ್ವರ ಅಡಿಗ, ಆಸ್ಟ್ರೋ ಮೋಹನ್, ಡಾ| ಭಾರ್ಗವಿ ಐತಾಳ್, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ […]
ಉಡುಪಿ:ಮೋಟರೀಕೃತ ದೋಣಿಗಳಿಗೆ ಇಂಜಿನ್ ಖರೀದಿಗೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ:ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರಿಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, […]
ಉಡುಪಿ:ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಆಯೋಜಿಸಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಯಶಸಿಗೊಳಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ […]