ಉಡುಪಿ: ಕಾಲೇಜಿಗೆ ಶುಲ್ಕ‌ ಪಾವತಿಸಲು ಹೋಗಿದ್ದ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆ. 4ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪ್ತತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ […]

ಪ್ರಕರಣಗಳ‌ ಮರುತನಿಖೆ ಹಕ್ಕು ಇರೋದು ಹೈಕೋರ್ಟ್ ಮತ್ತು ಸುಪ್ರೀಂಗೆ ಮಾತ್ರ!

ಬೆಂಗಳೂರು: ‘ಕ್ರಿಮಿನಲ್ ಪ್ರಕರಣದ ಮರು ತನಿಖೆ, ಹೊಸ ತನಿಖೆ ಅಥವಾ ತನಿಖೆಯನ್ನು ಯಾವುದೇ ಮತ್ತೊಂದು ಸಂಸ್ಥೆಗೆ ವರ್ಗಾಯಿಸುವ ಅಧಿಕಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಿಗೆ ಮಾತ್ರ ಇದೆಯೇ ಹೊರತಾಗಿ ವಿಚಾರಣಾ ನ್ಯಾಯಾಲಯಗಳಿಗೆ ಇಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕ್ರಿಮಿನಲ್ ಪ್ರಕರಣವೊಂದರಲ್ಲಿ ನಗರದ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿರುವ (ಎಸಿಜೆಎಂ) ಪ್ರಕರಣ ರದ್ದು ಕೋರಿ ನಗರದ 64 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ವಿಚಾರಣಾ ನ್ಯಾಯಾಲಯ […]

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಲವರ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಕುರಿತು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ರಪಂದು ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ -2) ರಾಜಾ ಇಮಾಮ್ ಖಾಸಿಂ […]

ಮಳೆ ಹಾನಿ ಪರಿಹಾರ ನೀಡದೆ ರಾಜ್ಯ ಸರಕಾರದಿಂದ ಜನರಿಗೆ ಅನ್ಯಾಯ: ಕುತ್ಯಾರು ನವೀನ್ ಶೆಟ್ಟಿ ಆರೋಪ

ಉಡುಪಿ: ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರವು ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ, ದನದ ಕೊಠಡಿ, ಕೋಳಿ ಶೆಡ್ ಗಳಿಗೆ ತುರ್ತಾಗಿ ಸ್ಪಂದಿಸದೆ ಜನರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ದೂರಿದರು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಕಾರ್ಕಳ ಹಾಗೂ ಕಾಪು ತಾಲೂಕಿನ 30ಕ್ಕೂ‌ ಅಧಿಕ ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. […]

ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್‌ ಸೊಸೈಟಿ: ವಿದ್ಯಾರ್ಥಿ ವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಂಗಳೂರು: 61 ವರ್ಷಗಳ ಇತಿಹಾಸವಿರುವ ಈ ಸಂಸ್ಥೆಯು ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಮಹತ್ತರ ಕೆಲಸವನ್ನು ಮಾಡುತ್ತಿದೆ. ಯಾವುದೇ ಒಂದು ಸಮಾಜದ ಅಭಿವೃದ್ಧಿ ಹಾಗೂ ಏಳಿಗೆಗೆ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆಂಗೇರಿ ವಿಶ್ವಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿ ಹೇಳಿದರು. ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್‌ ಸೊಸೈಟಿ ವತಿಯಿಂದ ಶ್ರೀರಾಧಾಕೃಷ್ಣ ದೇವಸ್ಥಾನದ ಬಾಳಂಭಟ್ ಹಾಲ್‌ನಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿ ವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ, […]