ನಾಳೆ (ಸೆ.7) ಉಡುಪಿ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರದಾನ ಸಮಾರಂಭ

ಉಡುಪಿ: ಆದರ್ಶ ಚಾರಿಟೇಬಲ್ ಟ್ರಸ್ಟ್ ಉಡುಪಿ, ಆದರ್ಶ ಸಮೂಹ ಸಂಸ್ಥೆಗಳು ಹಾಗೂ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರದಾನ ಸಮಾರಂಭವನ್ನು ಸೆ.7ರ ಭಾನುವಾರ ಬೆಳಿಗ್ಗೆ 9:30ಕ್ಕೆ ಅಲೆವೂರಿನ ಕೆಮ್ತೂರು ರಸ್ತೆಯ ಆದರ್ಶ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆದರ್ಶ ಆಸ್ಪತ್ರೆಯ ಸಿಇಒ‌ ವಿಮಲಾ ಚಂದ್ರಶೇಖರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಮಾರಂಭದಲ್ಲಿ ಉಡುಪಿ […]

ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್​​ 1’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು, ಹೊಸ ಅಪ್ಡೇಟ್ ಸದ್ಯದಲ್ಲೇ ಕೊಡಲಾಗುವುದು ಎಂದು ಹೊಂಬಾಳೆ ಫಿಲಂನವರು ಹೇಳಿದ್ದಾರೆ. ಕಾಂತಾರ-1′ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಗುಲ್ಷನ್ ದೇವಯ್ಯ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಸಾವಿರಾರು ಸಹ ಕಲಾವಿದರನ್ನು ಬಳಸಿಕೊಂಡು ಚಿತ್ರದ ಕೆಲ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಅಕ್ಟೋಬರ್ 2 ಗಾಂಧೀ ಜಯಂತಿಯಂದು ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದ್ದು ಚಿತ್ರತಂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಗಾಂಧಿ […]

ಕಾರ್ಕಳ ಕ್ರೈಸ್ಟ್ ಕಿಂಗ್’ನಲ್ಲಿ ಶಿಕ್ಷಕರ ದಿನಾಚರಣೆ; ಮಾನವೀಯ ಮೌಲ್ಯಗಳ ಅಧಃಪತನದಿಂದಾಗಿ ಗುರು-ಶಿಷ್ಯ ಸಂಬಂಧವು ಕುಸಿಯುತ್ತಿದೆ: ಎಸ್ ಎಲ್ ಭೋಜೇಗೌಡ

ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜುಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಸ್ ಎಲ್ ಭೋಜೆಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಪ್ರಸ್ತುತ ಸಮಾಜ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದು ಇದರಿಂದಾಗಿ ಗುರು ಶಿಷ್ಯ ಸಂಬಂಧದ ಮೌಲ್ಯ ಕೂಡಾ ಕುಸಿಯುತ್ತಿದೆ. ಇಂದು ಸಂಬಂಧಗಳನ್ನು ಹಣದ ಮೂಲಕ ಅಳೆಯುತ್ತಿರುವುದು ಖೇದಕರ ವಿಷಯ, […]

ಅಪರೂಪದ ಮಗು ಜನನ: 5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ ತಾಯಿ!

ಭೋಪಾಲ್‌: ಮಧ್ಯಪ್ರದೇಶದ ಜಬಲ್ಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು 5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ್ದು, ಇಂತಹ ಪ್ರಕರಣಗಳು ತೀರಾ ಅಪರೂಪದಲ್ಲಿ ಅಪರೂಪ ಎಂದು ವೈದ್ಯರು ಹೇಳಿದ್ದಾರೆ.ರಂಜಿ ಪ್ರದೇಶದ ನಿವಾಸಿ ಆನಂದ್ ಚೌಕ್ಸೆ ಅವರ ಪತ್ನಿ ಶುಭಾಂಗಿಗೆ ಸಿಸೇರಿಯನ್ ಮೂಲಕ ಮಗು ಜನಿಸಿದೆ ಎಂದು ಸ್ತ್ರೀರೋಗ ತಜ್ಞೆ ಡಾ.ಭಾವನಾ ಮಿಶ್ರಾ ತಿಳಿಸಿದ್ದಾರೆ. ಶುಭಾಂಗಿ 5.2 ಕೆ.ಜಿ ತೂಕದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ರೀತಿ ಅತಿ ತೂಕ ಹೊಂದಿರುವ ಶಿಶುಗಳು ಜನಿಸುವುದು ತೀರಾ ಕಡಿಮೆ. ಇಂತಹ […]

ಉಡುಪಿ:ಕುಂದಾಪುರ – ಕೋಟೇಶ್ವರದಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಉಡುಪಿ:ಕುಂದಾಪುರದ ಹೆಸರಾಂತ ಎಲೆಕ್ಟ್ರಾನಿಕ್ ಶೋರೂಮ್ ಮತ್ತು ಕೋಟೇಶ್ವರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ಸಂಪರ್ಕಿಸಿ:📞9148688988, 📞9071275778