ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಹತ್ಯೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು […]
ಅಮಾಸೆಬೈಲು: ಲೈಂಗಿಕ ದೌರ್ಜನ್ಯ ಪ್ರಕರಣ; ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಕುಂದಾಪುರ: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ಕುರಿತು ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ದೂರುದಾರೆ ಧರ್ಮಸ್ಥಳದ ಧರ್ಮ ಸಂರಕ್ಷಣಾಯಾತ್ರೆಯ ಸಭೆಯ ಬಗ್ಗೆ ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ, ನವೀನಚಂದ್ರ ಶೆಟ್ಟಿ ರಟ್ಟಾಡಿಗೆ ಕಾರ್ಯಕ್ರಮ ಆಹ್ವಾನ ಪತ್ರಿಕೆ ಕೊಡಲು ತೆರಳಿದ್ದರು. ಕುಂದಾಪುರ ತಾಲೂಕು ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿಯ ಮನೆಗೆ ಬರುವಂತೆ ಕರೆದ ಆರೋಪಿ ಆಹ್ವಾನ ಪತ್ರಿಕೆ ಪಡೆಯುವಾಗ ಯುವತಿಯ ಕೈಯನ್ನು ಸ್ವರ್ಶಿಸಿದ್ದಾನೆ.ಇದರಿಂದ ಯುವತಿಗೆ […]
ಸೈಮಾ-2025 ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಇಲ್ಲಿದೆ ಪ್ರಶಸ್ತಿ ವಿಜೇತರ ವಿವರ!

ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ರಲ್ಲಿ ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಸೆ.5 ರಂದು ದುಬೈಯಲ್ಲಿ ಅದ್ದೂರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ […]
ಮಣಿಪಾಲ: ಪಾರ್ಟ್ ಟೈಮ್ ಕೆಲಸಕ್ಕೆ ಬೇಕಾಗಿದ್ದಾರೆ.

ಮಣಿಪಾಲ: ಪತ್ರಿಕೆ ವಿತರಿಸಲು ಪಾರ್ಟ್ ಟೈಮ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಆಸಕ್ತರು ದ್ವಿಚಕ್ರವಾಹನ ಹಾಗೂ ಲೈಸೆನ್ಸ್ ಹೊಂದಿರಬೇಕು. ಮಣಿಪಾಲದ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8123314897