ಅತ್ಯಾಚಾರ: ಸಂತ್ರಸ್ತೆ ಸಾಕ್ಷ್ಯ ಸಾಕು; ದೆಹಲಿ ಹೈಕೋರ್ಟ್

ನವದೆಹಲಿ: 2017ರಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ವಿಧಿಸಿದ್ದ 12 ವರ್ಷ ಜೈಲುಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಸಂತ್ರಸ್ತೆಯ ಸಾಕ್ಷ್ಯವು ವಿಶ್ವಾಸಾರ್ಹವಾಗಿದ್ದರೆ, ಅಪರಾಧಿಗೆ ಶಿಕ್ಷೆ ನೀಡಲು ಈ ಹೇಳಿಕೆಯನ್ನಷ್ಟೇ ನ್ಯಾಯಾಲಯವು ಅವಲಂಬಿಸಬಹುದು ಎಂದು ಕೋರ್ಟ್ ಹೇಳಿದೆ.ಅತ್ಯಾಚಾರ ಪ್ರಕರಣದ ಅಪರಾಧಿ ಟೋನಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಮನೋಜ್ ಕುಮಾರ್ ಒಹ್ರಿ ಈ ಆದೇಶ ನೀಡಿದ್ದಾರೆ. ‘ಒಂದೊಮ್ಮೆ ಸಂತ್ರಸ್ತೆಯು ಘಟನೆಯ ಏಕೈಕ ಸಾಕ್ಷಿಯಾಗಿದ್ದು, ಆಕೆಯ ಹೇಳಿಕೆಯು ವಿಶ್ವಾಸಾರ್ಹವಾಗಿದ್ದರೆ ಶಿಕ್ಷೆಯನ್ನು ಅದು ಖಾತರಿಪಡಿಸುತ್ತದೆ […]
ಉಡುಪಿ:ನವೋದ್ಯಮ ಪ್ರಾರಂಭಿಸಲು ಉತ್ತೇಜನ : ಅರ್ಜಿ ಆಹ್ವಾನ

ಉಡುಪಿ:ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಯುವಕ ಹಾಗೂ ಯುವತಿಯರಿಗೆನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ Elevate (Minorities) -2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://eitbt.karnataka.gov.in/en ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 080-2223100 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ […]
ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೆ.7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 800 ಕೆಪಿಎಸ್‌ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕಲಬುರಗಿ ಭಾಗದಲ್ಲಿ 5 […]
ಉಡುಪಿ ತಾಲೂಕು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 02ಅಂಗನವಾಡಿ ಕಾರ್ಯಕರ್ತೆ ಹಾಗೂ 40 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿಪೂರ್ಣಗೊಳಿಸಿ, […]
ಉಡುಪಿ:ಸೆ.11 ರಂದು ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ), ಗಸ್ತು ಅರಣ್ಯ ಪಾಲಕರ ಸಂಘ ಮತ್ತು ವೀಕ್ಷಕರ ಸಂಘ (ರಿ),ರಕ್ತನಿಧಿ ಕೇಂದ್ರ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಐ.ಎಂ.ಎ (ಇಂಡಿಯನ್ ಮೆಡಿಕಲ್ ಅಸೋಸಿಯೇಷನ್) ಉಡುಪಿ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ 25 ನೇ ವರ್ಷದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಸೆಪ್ಟಂಬರ್ 11 ರಂದು ಬೆಳಗ್ಗೆ 11 ಗಂಟೆಗೆ ನಗರದ ಐ.ಎಂ.ಎ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ಉದ್ಘಾಟಿಸಲಿದ್ದು, ಉಪ […]