‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆ: ಪೌರಾಣಿಕ ಪ್ರಸಂಗಳ ಸಂದೇಶದಿಂದ ನೈತಿಕ ಸಮಾಜದ ನಿರ್ಮಾಣ ಸಾಧ್ಯ: ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಮಕ್ಕಳಿಗೆ, ಯುವ ಜನತೆಗೆ ನೈತಿಕ ಸಂದೇಶ ಬಿತ್ತಲು ನಮ್ಮ ಪೌರಾಣಿಕ ಪ್ರಸಂಗಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಅದು ಯಕ್ಷಗಾನವಿರಬಹುದು, ನಾಟಕವೇ ಆಗಿರಬಹುದು ಪುರಾಣ ಪ್ರಸಂಗಳಲ್ಲಿ ಅಡಕವಾಗಿರುವ ಸತ್ಯ, ಧರ್ಮ, ನಿಷ್ಠೆ, ಪ್ರಾಮಾಣಿಕತೆ ಮೊದಲಾದ ಮೌಲ್ಯಗಳು ನೈತಿಕ ಪ್ರಜ್ಞೆಯನ್ನು ಬಡಿದೆಬ್ಬಿಸುವ ಶಕ್ತಿಯನ್ನು ಹೊಂದಿವೆ. ನಾವು ನಂಬಿರುವ ದೇವರು, ದೈವಗಳ ಇರಿಹಾಸವನ್ನು ಇಂದು ನಾಟಕ, ಯಕ್ಷಗಾನಗಳಲ್ಲಿ ಕಟ್ಟಿಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ […]

2025ನೇ ಸಾಲಿನ ಪ್ರತಿಷ್ಠಿತ ರಚನಾ ಪ್ರಶಸ್ತಿ ಪ್ರಕಟ.

ಮಂಗಳೂರು: 1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ. ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ. ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, […]

ಉಡುಪಿ ಬಡಗಬೆಟ್ಟು ಸೊಸೈಟಿಗೆ 15.47 ಕೋಟಿ ರೂ. ನಿವ್ವಳ ಲಾಭ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 15.47 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ. ಉಡುಪಿ ಅಮ್ಮಣ್ಣಿರಾಮಣ್ಣ ಸಭಾಭವನದಲ್ಲಿ ಭಾನುವಾರ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 21,519 ಸದಸ್ಯರಿಂದ 4.83ಕೋಟಿ […]

ಜಿಲ್ಲಾ ಆದರ್ಶ ಶಿಕ್ಷಕಿ ಪ್ರಶಸ್ತಿ ಪಡೆದ ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ಸಹಶಿಕ್ಷಕಿ ವೀಣಾ ಕೆ.

ಉಡುಪಿ: ಆದರ್ಶ ಆಸ್ಪತ್ರೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ಸಹಶಿಕ್ಷಕಿ ಶ್ರೀಮತಿ ವೀಣಾ ಕೆ. ಇವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಆದಿವುಡುಪಿ ಶಿಕ್ಷಣ ಸಂಸ್ಥೆಯಲ್ಲಿ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಶಾಲೆಯ ವಿವಿಧ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿ, ಹೆಚ್ಚಿನ ತರಬೇತಿಯನ್ನು ನೀಡಿ, ವಿದ್ಯಾರ್ಥಿಗಳು ಬಹುಮಾನಗಳನ್ನು […]

ಹಿರಿಯ ಸಾಹಿತಿ ಕೀರ್ತಿ ಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ: ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಹೆಬ್ರಿ: ಕಳೆದ ಹಲವಾರು ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸದೆ ತನ್ನಷ್ಟಕ್ಕೆ ಶಿಕ್ಷಣ ಜೊತೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಗುರುತಿಸಿಕೊಂಡ ಶಿಕ್ಷಕರನ್ನ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಮಾಜಮುಖಿ ಚಿಂತನೆ ಶ್ಲಾಘನೀಯ. ಈ ಬಾರಿಯ ಪ್ರಶಸ್ತಿಯನ್ನು ಉತ್ತಮ ಸಮಾಜಮುಖಿ ಶಿಕ್ಷಕ ರವೀಂದ್ರ ಹೆಗ್ಡೆ ಅವರಿಗೆ ನೀಡಿಗೌರವಿಸಿರುವುದು ಸಂತಸ ತಂದಿದೆ ಎಂದು ಹೆಬ್ರಿ ತಾಲೂಕು ತಹಶೀಲ್ದಾರ್ ಪ್ರಸಾದ್ ಎಸ್. ಎ. ಹೇಳಿದರು. ಅವರು ಹೆಬ್ರಿ ಬಂಟರ ಭವನದಲ್ಲಿ ನಾಡಿನ ಹಿರಿಯ ಸಾಹಿತಿ ಕೀರ್ತಿ ಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ […]