ಮಣಿಪಾಲ: ಸೆ.12ರಂದು ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಆಶ್ರಯದಲ್ಲಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆರಂಭಿಸಿರುವ “ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ ಇದೇ ಸೆ.12ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಅಧ್ಯಕ್ಷ ಕೆ.ಎಸ್. ಜೈ ವಿಠಲ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೂತನ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ […]

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಜನತಾ ಕಾಲೇಜಿನ ಮಡಿಲಿಗೆ ಅವಳಿ ಪ್ರಶಸ್ತಿಗಳು

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ ತಾಲೂಕು ಮಟ್ಟದ ತ್ರೋಬಾಲ್ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ವಿದ್ಯಾರ್ಥಿಗಳಾದ ಮೌನೇಶ್, ಯೋಗೀಶ್, […]

ನೇಪಾಳದಲ್ಲಿ ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್’ನಂತಹ 26 ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ

ನೇಪಾಳ: ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ 19 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಯುವಕರು ರೀಲ್ಸ್ ಮಾಡುವುದಕ್ಕೆ ಸರ್ಕಾರ ಕಡಿವಾಣ ಹಾಕಿದ ಬೆನ್ನಲ್ಲೇ ಯುವಜನತೆ ಬೀದಿಗಿಳಿದು ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಉದ್ಯೋಗಗಳು ಎಲ್ಲಿವೆ ಎಂದು ಕೇಳಲು ಪ್ರಾರಂಭಿಸಿದ್ದಾರೆ. ಸರ್ಕಾರವು ಸೈನ್ಯವನ್ನು ನಿಯೋಜಿದ್ದು ಕರ್ಫ್ಯೂ ವಿಧಿಸಿದೆ. […]

ಮಹಾರಾಷ್ಟ್ರ: ಗಣೇಶ ಮೂರ್ತಿ ಕೈಯಲ್ಲಿದ್ದ ಮೋದಕ 1.58 ಲಕ್ಷ ರೂ.ಗೆ ಹರಾಜು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್​ನಾಥ್​ದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿ ಕೈಯಲ್ಲಿದ್ದ ಮೋದಕ(ಸಿಹಿ ಕಡುಬು)1.85 ಲಕ್ಷ ರೂ.ಗೆ ಸೋಮವಾರ ಹರಾಜಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಹೌದು, ಇಲ್ಲಿನ ಶ್ರೀ ಖತುಶ್ಯಾಮ್​ ಗಣಪತಿ ಮಂಡಳಿ ಪ್ರತಿ ವರ್ಷದಂತೆ ಈ ಬಾರಿ ಕೂಡ ಮೋದಕ ಹರಾಜಾಗಿದೆ. ಆದರೆ, ಬರೊಬ್ಬರಿ 1.85 ಲಕ್ಷ ರೂ.ಗೆ ಹರಾಜಾಗಿರೋದು ಎಲ್ಲರ ಕಣ್ಣು ಹುಬ್ಬೆರುವಂತೆ ಮಾಡಿದೆ.10 ದಿನಗಳ ಉತ್ಸವದ ಕೊನೆಯ ದಿನದಂದು ಮೋದಕವನ್ನು ವಿಗ್ರಹದ ಕೈಯಲ್ಲಿ ಇರಿಸಿದ ನಂತರ ಹರಾಜು ಮಾಡುವುದು ಕಳೆದ 11 […]

ರೋಚಕ ಕ್ವಾರ್ಟರ್ ಫೈನಲ್ ಪಂದ್ಯ; ಯುವ ಪ್ರತಿಭೆಗಳ ಆಟಕ್ಕೆ ಸಾಕ್ಷಿಯಾದ ಸುಬ್ರೋತೋ ಕಪ್

ಬೆಂಗಳೂರು: ಸೆ.8 ರಂದು ನಡೆದ 64ನೇ ಸುಬ್ರೋತೋ ಕಪ್ ಅಂತಾರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್‌ನ ಸಬ್ ಜೂನಿಯರ್ ಬಾಲಕರ (U-15) ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಗಳು ರೋಚಕ ಕ್ಷಣಕ್ಕೆ ಸಾಕ್ಷಿಯಾಗಿವೆ. ಕ್ವಾರ್ಟರ್ ಫೈನಲ್ 1: ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) VS SFS ಹೈಯರ್ ಸೆಕಂಡರಿ ಸ್ಕೂಲ್ (ನಾಗಾಲ್ಯಾಂಡ್)ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) SFS ಹೈಯರ್ ಸೆಕೆಂಡರಿ ಸ್ಕೂಲ್ (ನಾಗಾಲ್ಯಾಂಡ್) ವಿರುದ್ಧ 10-0 ಅಂತರದ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿತು. ಲುಂಗ್ಡೆಮ್ (4’, 30’), ರಿಮೋಸಾನ್ (25’), […]