ಭ್ರೂಣ ಲಿಂಗ ಪತ್ತೆ ವಿರೋಧಿ ಕಾಯ್ದೆಯ ಗಡುವು ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ‘ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ (ಪಿಸಿ–ಪಿಎನ್‌ಡಿಟಿ) ಕಾಯ್ದೆ ಮತ್ತು ಸಂಬಂಧಿತ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಕೋರಿ ಸಲ್ಲಿಯಾಗಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡಲು ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಮತ್ತೆ ನಾಲ್ಕು ವಾರ ಕಾಲಾವಕಾಶ ನೀಡಿದೆ.ಐದು ರಾಜ್ಯಗಳು ತಮ್ಮ ನಿಲುವು ಸ್ಪಷ್ಟಪಡಿಸದ ಕಾರಣ ಸುಪ್ರೀಂ ಕೋರ್ಟ್‌ ಮಂಗಳವಾರ ಮತ್ತೆ ಗಡುವು ವಿಸ್ತರಿಸಿದೆ. ಈ ಕುರಿತಂತೆ ಪ್ರತಿಕ್ರಿಯೆ ಸಲ್ಲಿಸಲು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಪಿಸಿಪಿಎನ್‌ಡಿಟಿ ಕಾಯ್ದೆಯು ಭ್ರೂಣದ ಲಿಂಗ ಪತ್ತೆಗಾಗಿ […]

ಬುರ್ಖಾ ಹಾಕಿ ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಿ:ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ವಿ ಸುನಿಲ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುರ್ಖಾ ಹಾಕಿಕೊಂಡು ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಲಿ ಎಂದು ಟೀಕಿಸಿರುವ ಮಾಜಿ ಸಚಿವ ವಿ.ಸುನಿಲ್ ಕುಮಾರ್‌, ಕಾಂಗ್ರೆಸ್‌ ಸರಕಾರ ಬಂದ ಅನಂತರ ಮಂಡ್ಯ ಜಿಲ್ಲೆ ಜೆಹಾದಿ ಚಟುವಟಿಕೆಗಳ ಪ್ರಯೋಗ ಶಾಲೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಇದರಿಂದಾಗಿ ಈ ಸರಕಾರದ ಆದ್ಯತೆ ಏನೆಂಬುದು ಸ್ಪಷ್ಟವಾಗಿದೆ. […]

ಉಡುಪಿ:ಬ್ರಹ್ಮಾವರದ ಹಿರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಹಿರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔸ಮ್ಯಾನೇಜರ್ -01🔸ಸರ್ವಿಸ್ ಮ್ಯಾನೇಜರ್ -01🔸ಸೇಲ್ಸ್ ಎಕ್ಸಿಕ್ಯೂಟಿವ್ -01🔸ಸರ್ವಿಸ್ ಅಡ್ವೈಸರ್ -02🔸ಹೌಸ್ ಕೀಪಿಂಗ್ -01🔸ಹೆಲ್ಪರ್ -02🔸ಮೆಕ್ಯಾನಿಕ್ -04🔸ವಾಷಿಂಗ್ -01 ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಗೆ ಕಳುಹಿಸಿ[email protected] ಸಂಪರ್ಕಿಸಿ: +917996210666

ಎಸ್.ಕೆ ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ: ಚಿತ್ರ ಸಿಂಚನ -2025 ಸಮಾರಂಭ.

ಮಂಗಳೂರು: ದೇವಮಾನವ ಕೀರ್ತಿಶೇಷ ಪಾಲ್ಕೆ ಬಾಬುರಾಯ ಆಚಾರ್ಯರ ತ್ಯಾಗ, ಸೇವೆ, ಸಮರ್ಪಣಾ ಭಾವಗಳ ನೆನಪು ಬದುಕಿಗೆ ದಾರಿದೀಪವಾಗಬೇಕು. ದೇವಮಾನರೆಂದೇ ಕರೆಯಲ್ಪಡುವ ಪಾಲ್ಕೆ ಬಾಬುರಾಯ ಆಚಾರ್ಯರು ‘ಸರಳ ಜೀವನ, ಉದಾತ್ತ ಚಿಂತನೆ’ ಇದು ಅವರ ಬದುಕಿನ ಬಹುಮುಖ್ಯ ಮೌಲ್ಯವಾಗಿತ್ತು “ಇಂದಿಗೂ ಸಾವಿರಾರು ಜನರ ಹೃದಯದಲ್ಲಿ ಪಾಲ್ಕೆ ಬಾಬುರಾಯ ಆಚಾರ್ಯರು ಜೀವಂತವಾಗಿದ್ದಾರೆ ಎಂದು ವಿಶ್ವಕರ್ಮ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎ.ಆಚಾರ್ಯ ಅಭಿಪ್ರಾಯಪಟ್ಟರು. ಎಸ್.ಕೆ ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ ಆಯೋಜಿಸಿದ್ದ ವಜ್ರಮಹೋತ್ಸವ ಮತ್ತು ಸಂಸ್ಥೆಯ ಸ್ಥಾಪಕರಾದ ಪಾಲ್ಕೆ […]

ಕಾರ್ಕಳ ಪರಶುರಾಮ ಪ್ರತಿಮೆ:ಸರ್ಕಾರಕ್ಕೆ ನೋಟಿಸ್ ನೀಡಿದ ಕೋರ್ಟ್

ಬೆಂಗಳೂರು: ‘ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.ಈ ಸಂಬಂಧ ಉಡುಪಿ ತಾಲ್ಲೂಕಿನ ವರಂಗ ಗ್ರಾಮದ ಉದಯ ಶೆಟ್ಟಿ ಮುನಿಯಾಲು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‍ಪ್ರತಿವಾದಿಗಳಾದ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ […]