ಅಡುಗೆಗೆ ಯಾವ ಎಣ್ಣೆ ಬೆಸ್ಟ್, ಯಾವ ಎಣ್ಣೆಗೆ ಯಾವ ಗುಣ? ಅಡುಗೆ ಎಣ್ಣೆಯ ಈ ಸಂಗತಿಗಳನ್ನು ನೀವು ತಿಳಿದುಕೊಂಡಿರಲೇಬೇಕು!

ಅಡುಗೆ ಎಣ್ಣೆಯ ಬಳಕೆ ಬಗ್ಗೆ ಕೆಲವೊಂದು ವಿಚಾರಗಳನ್ನು ನಾವು ತಿಳಿದುಕೊಂಡಿರಲೇಬೇಕು. ಸನ್‌ಫ್ಲವರ್ ಎಣ್ಣೆ, ಸಾಸಿವೆ ಎಣ್ಣೆ, ತೆಂಗಿನೆಣ್ಣೆಗಳನ್ನು ಅಡುಗೆಯಲ್ಲಿ ಬಳಸುತ್ತಾರೆ. ಆದರೆ ಇವುಗಳಲ್ಲಿ ಆರೋಗ್ಯಕ್ಕೆ ಒಳ್ಳೇದು ಯಾವುದು, ಇವುಗಳ ಮೂಲ ಗುಣಗಳೇನು ಎಂದು ತಿಳಿದುಕೊಂಡಿರೋದು ಕೂಡ ತುಂಬಾ ಮುಖ್ಯ. 2024ರಲ್ಲಿ ICMR ಮತ್ತು NIN ಹೊಸ ಡಯಟ್ ಗೈಡ್‌ಲೈನ್ಸ್ ಕೊಟ್ಟಿದ್ದಾರೆ. ಅದರಲ್ಲಿ “ಒಂದೇ ಎಣ್ಣೆಯನ್ನು ಬಳಸುವ ಬದಲು, ಬೇರೆ ಬೇರೆ ಎಣ್ಣೆಗಳನ್ನು ಮಿಕ್ಸ್ ಮಾಡಿ ಬಳಸಿ” ಎನ್ನುವ ಸಲಹೆ ನೀಡಲಾಗಿದೆ. ಯಾಕಂದ್ರೆ, ಒಂದೊಂದು ಎಣ್ಣೆಯಲ್ಲೂ ಒಂದೊಂದು ತರಹದ […]
ಕೊಡವೂರಿನಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರದ ಸಮಾರೋಪ

ಉಡುಪಿ: ನಾನು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷನಾಗಲು ಬಯಸಿದ್ದ ಉದ್ದೇಶ ಇಷ್ಟೇ, ಅಕಾಡೆಮಿ ಕೊಡುವ ಸೌಲಭ್ಯಗಳು ಕಲೆ, ಕಲಾವಿದರನ್ನು ಮುಟ್ಟಬೇಕು ಎನ್ನುವುದು. ಹೀಗಾಗಿ ಯಕ್ಷಗಾನಕ್ಕೆ ಸಂಬoಧಿಸಿದ ಕಾರ್ಯಕ್ರಮಗಳಿಗೆ ಸಹಕಾರ ಕೋರಿ ಬರುವ ಸಂಘಸoಸ್ಥೆಗಳನ್ನು ಬೆಂಬಲಿಸುವ ಕಾರ್ಯ ಮಾಡುತ್ತಿದ್ದೇನೆ. ಯಕ್ಷಗಾನ ಉಳಿಸುವುದು ಕೇವಲ ಅಕಾಡೆಮಿಯ ಕೆಲಸವಲ್ಲ, ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ ಸಂಘ ಸಂಸ್ಥೆಗಳು ಅಕಾಡೆಮಿ ಜೊತೆಗೆ ಕೈ ಜೋಡಿಸಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಸೋಮವಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಸುಮನಸಾ […]
ಉಡುಪಿ: ಜುವೆಲ್ಲರಿ ವರ್ಕ್‌ಶಾಪ್ ಗೆ ನುಗ್ಗಿ ಅಪಾರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ; ಸಿಸಿಟಿವಿಯಲ್ಲಿ ಬಯಲಾಯಿತು ಕಳ್ಳರ ಕೃತ್ಯ

ಉಡುಪಿ: ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳ್ಳತನಗೈದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವರ್ಕ್‌ಶಾಪ್‌ನ ಒಳಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ಈ ಕೃತ್ಯದಲ್ಲಿ ಇಬ್ಬರು ಮುಸುಕುಧಾರಿಗಳು ಇರುವುದು ಕಂಡುಬಂದಿದೆ. ಅದರಲ್ಲಿ ಒಬ್ಬಾತ ಮೊದಲಿಗೆ ಒಳಗೆ ಬಂದು ಒಳಗಿನ ಎರಡು ಸಿಸಿಟಿವಿ ಕ್ಯಾಮೆರಾಗಳಿಗೆ ಸ್ಪ್ರೇ ಹಾಕಿ ದೃಶ್ಯ ಕಾಣದಂತೆ ಮಾಡಿರುವುದು ಸೆರೆಯಾಗಿದೆ. ಕಳ್ಳರು ಕಾರು ಮತ್ತು ಬೈಕಿನಲ್ಲಿ ಬಂದು […]
ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ ರೋಹನ್ ಕಾರ್ಪೊರೇಷನ್’ನ ಮಹತ್ವಾಕಾಂಕ್ಷಿ ಯೋಜನೆ “ರೋಹನ್ ಮರೀನಾ ಒನ್”

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, […]
ಮಣಿಪುರ: ಬಾವಿಗೆ ಬಿದ್ದ ಚಿರತೆ ಮರಿಯ ರಕ್ಷಣೆ

ಉಡುಪಿ: ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಕೊಂಡೊಯ್ಯದ್ದು ಬಿಟ್ಟಿದ್ದಾರೆ.ಜೇಕಬ್ ಸಿಕ್ಕೇರ ಅವರ ತೋಟದ […]