ಉಡುಪಿ: ಉದ್ಯಾವರದಲ್ಲಿ ಬೈಕ್-ಟ್ಯಾಂಕರ್ ನಡುವೆ ಅಪಘಾತ; ಸವಾರ ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿ ಉದ್ಯಾವರ ಸಮೀಪದ ಬಲೈಪಾದೆ ಜಂಕ್ಷನ್‌ನಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ನಿವಾಸಿ ಸುರೇಶ್ (43) ಎಂದು ಗುರುತಿಸಲಾಗಿದೆ. ಸುರೇಶ್ ಅವರು ಬ್ರಹ್ಮಾವರದಲ್ಲಿ ಬ್ರಹ್ಮಾವರ ವರ್ಕ್ ಶಾಪ್‌ ಅಂಗಡಿಯನ್ನು ನಡೆಸುತ್ತಿದ್ದರು. ಇವರು ಕೆಲಸ ಮುಗಿಸಿ ಉದ್ಯಾವರದಿಂದ ಹಿಂತಿರುಗುತ್ತಿದ್ದಾಗ, ಕಟಪಾಡಿಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಅವರ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ, ಅವರು ತಮ್ಮ ಬೈಕ್‌ನೊಂದಿಗೆ […]

ಮುಂಡ್ಕೂರಿನಲ್ಲಿ ಅಡಿಕೆ ಕಳವು ಪ್ರಕರಣ: 12 ಮಂದಿ ಅಪ್ರಾಪ್ತ ಬಾಲಕರ ಬಂಧನ.

ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮುಂಡ್ಯೂರಿನಲ್ಲಿ ಕಳೆದ ತಿಂಗಳು ನಡೆದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ 12 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ.23ರಂದು ಮುಂಡೂರು ತೋಟದ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳವಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಸೆ.8ರಂದು 12 ಮಂದಿ ಬಾಲಕರನ್ನು ಬಂಧಿಸಿ, 5ಲಕ್ಷ ರೂ. ಮೌಲ್ಯದ 1100 ಕೆಜಿ ಅಡಿಕೆಯನ್ನು ವಶ ಪಡಿಸಿಕೊಂಡಿದ್ದಾರೆ. […]

ಉಡುಪಿ: ಉದ್ಯಮಿ ಪ್ರದೀಪ್ ಹೃದಯಘಾತದಿಂದ ಮೃತ್ಯು

ಉಡುಪಿ: ಉದ್ಯಮಿ, ಕ್ರಿಕೆಟ್ ಪಟು ಅಂಬಲಪಾಡಿ ಕಿದಿಯೂರಿನ ಪ್ರದೀಪ್(52) ಸೆ.8ರಂದು ರಾತ್ರಿ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪ್ರದೀಪ್ ಅವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಡೆತನದ ಮಲ್ಪೆಯ ಪೆಟ್ರೋಲ್ ಪಂಪ್‌ನಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಉತ್ತಮ ಕ್ರಿಕೆಟ್ ಪಟು ಆಗಿದ್ದರು. ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಇವರು, ಉತ್ತಮ ಜಿಮ್‌ಪಟು ಆಗಿದ್ದರು.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು. ಉಪರಾಷ್ಟ್ರಪತಿ ಚುನಾವಣೆಗೆ 14 ಸಂಸದರು ಗೈರು ಹಾಜರಾಗಿದ್ದು 767 ಸಂಸದರು ಮತ ಚಲಾಯಿಸಿದ್ದರು. ರಾಧಾಕೃಷ್ಣನ್ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. 15 ಮತಗಳನ್ನು […]

ಉಡುಪಿ:ಹಿರಿಯ ನಾಗರಿಕರ ದಿನಾಚರಣೆಗೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಿ : ಶ್ಯಾಮಲಾ ಸಿ.ಕೆ

ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಜೊತೆಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 4 ರಂದು […]