ಸೆ.13 ಮತ್ತು 14ರಂದು ಉಡುಪಿಯಲ್ಲಿ ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ಆಚರಣೆ

ಉಡುಪಿ: ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ಆಚರಣೆಯನ್ನು ಸೆ. 13 ಮತ್ತು 14ರಂದು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಜಿಎಂ ಕೆ.ಟಿ. ರೈ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025ನೇ ವರ್ಷವು ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ವರ್ಷವಾಗಿದ್ದು, ಈ ಮೈಲಿಗಲನ್ನು ಸ್ಮರಿಸುವ ಉದ್ದೇಶದಿಂದ ಸಿಂಡಿಕೇಟ್ ಬ್ಯಾಂಕಿನ ಮಾಜಿ ಉದ್ಯೋಗಿಗಳು ಜೊತಗೂಡಿ ಈ ಎರಡು ದಿನಗಳ ಕಾಲ ಉಡುಪಿಯಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ ಎಂದರು. ಸೆ.13ರಂದು ಸಂಜೆ […]

ಉಡುಪಿ:ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ “ಉಡುಪಿ ಶ್ರೀ ಕೃಷ್ಣ ರೈಲ್ವೆ ನಿಲ್ದಾಣ” ಎಂದು ಮರುನಾಮಕರಣ

ಉಡುಪಿ : ಜಿಲ್ಲೆಯ ಪ್ರಮುಖ ರೈಲ್ವೆ ನಿಲ್ದಾಣವಾಗಿರುವ ಇಂದ್ರಾಳಿ ರೈಲ್ವೆ ನಿಲ್ದಾಣ ಇದೀಗ ಹೊಸ ರೂಪದಲ್ಲಿ ಪರಿಚಿತವಾಗಲಿದೆ. ರೈಲ್ವೆ ಇಲಾಖೆ ಅಧಿಕೃತವಾಗಿ ಈ ನಿಲ್ದಾಣವನ್ನು “ಉಡುಪಿ ಶ್ರೀ ಕೃಷ್ಣ” ಎಂದು ಮರುನಾಮಕರಣ ಮಾಡಿದೆ. ಮಂಗಳೂರಿನಿಂದ ಕಾಸರಗೋಡು, ಗೋವಾ, ಮುಂಬೈ, ಬೆಂಗಳೂರು ಮುಂತಾದ ಕಡೆಗಳಿಗೆ ಸಂಚಾರ ಮಾಡುವ ಅನೇಕ ರೈಲುಗಳು ತಂಗುವ ಈ ನಿಲ್ದಾಣಕ್ಕೆ ಉಡುಪಿ ಶ್ರೀಕೃಷ್ಣನ ಹೆಸರನ್ನು ಇಡುವ ಮೂಲಕ ನಗರದ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುತನ್ನು ರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ತಲುಪಿಸಲು ಸಹಾಯವಾಗಲಿದೆ ಎಂದು ಅಧಿಕಾರಿಗಳು […]

ಉಡುಪಿ:ಸೆ.13ರಂದು ಬೃಹತ್ ಉದ್ಯೋಗ ಮೇಳ

ಉಡುಪಿ:ಉಡುಪಿ ನಗರಸಭೆ ಮತ್ತು ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ, ಕಡಲತೀರ, ಮಲ್ಪೆ ಇವರ ಜಂಟಿ ಆಶ್ರಯದಲ್ಲಿ M/s Yashas Management Solution Pvt. Ltd. Bangalore ಇವರ ಸಹಭಾಗಿತ್ವದಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಮತ್ತು ನಗರಸಭಾ ಅಧ್ಯಕ್ಷರಾದ ಪ್ರಭಾಕ‌ರ್ ಪೂಜಾರಿಯವರ ಸಹಕಾರದೊಂದಿಗೆ ಸೆ.13ರ ಶನಿವಾರದಂದು ಬೃಹತ್ ಉದ್ಯೋಗ ಮೇಳವು ಸಮಯ ಬೆಳಿಗ್ಗೆ 8.30ರಿಂದ ಸಂಜೆ 5.00 ಗಂಟೆಯವರೆಗೆ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ನಡೆಯಲಿದೆ.ಇಲ್ಲಿ ಅನೇಕ ಹೆಸರಾಂತ ಕಂಪನಿಗಳು […]

ಮಂಗಳೂರು:ಎಕ್ಸ್ಪರ್ಟ್ ಪಿಯು ಕಾಲೇಜು: 15 ವಿದ್ಯಾರ್ಥಿಗಳು ಏಮ್ಸ್ ಗೆ ಪ್ರವೇಶ

ಮಂಗಳೂರು: ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ 11 ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ.ಇದಲ್ಲದೆ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರಿನ ಬಿಎಂಸಿಗೆ 23, ಮೈಸೂರಿನ ಎಂಎಂಸಿಗೆ 27, ಮಂಗಳೂರಿನ ಕೆಎಂಸಿಗೆ 13, ಹುಬ್ಬಳ್ಳಿಯ ಕೆಐಎಂಎಸ್ 14, ಧಾರವಾಡದ ಎಸ್‌ಡಿಎಂಗೆ 21 ಸೇರಿದಂತೆ ಒಟ್ಟು ಅಖಿಲ ಭಾರತ ಕೋಟಾದಡಿ 78 ಹಾಗೂ ರಾಜ್ಯ ಕೋಟಾದಡಿ 478 […]

ಕಾರ್ಕಳ ಕ್ರೈಸ್ಟ್ ಕಿಂಗ್: ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಹಾಗೂ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಕಾವಡಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಒಂಬತ್ತನೇ ತರಗತಿಯ ಶಗುನ್ ವರ್ಮಾ, ಶೈನಿ ಡಿಸೋಜಾ, ಕಾರ್ತಿಕಾ ಶೆಟ್ಟಿ, ಆಶಿಕಾ, ಹತ್ತನೇ ತರಗತಿಯ ವಿದ್ಯಾಶ್ರೀ, ಕೀರ್ತನಾ ಡಿಸೋಜ, ಎಂಟನೇ […]