ಬಂಟಕಲ್ ಕಾಲೇಜಿನಲ್ಲಿ ಸಾಫ್ಟ್ ಸ್ಕಿಲ್ ಮತ್ತು ಕಮ್ಯುನಿಕೇಶನ್ ಸ್ಕಿಲ್ ಕುರಿತು ಕಾರ್ಯಾಗಾರ

ಉಡುಪಿ, ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಸಹಯೋಗದಲ್ಲಿ 9 ಸೆಪ್ಟೆಂಬರ್ 2025 ರಂದು “ಸಾಫ್ಟ್ ಸ್ಕಿಲ್ ಮತ್ತು ಕಮ್ಯುನಿಕೇಶನ್ ಸ್ಕಿಲ್” ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ಇದರ ವಿಶೇಷ ಅಧಿಕಾರಿಯಾದ ಡಾ. ದಾಮೋದರ ನಾರಲ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂವಹನ ಹಾಗೂ ಅಂತರ ವ್ಯಕ್ತಿತ್ವ ಕೌಶಲ್ಯಗಳ […]

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ; 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ, ನಿವ್ವಳ ಲಾಭ 15.47 ಕೋಟಿ ರೂ., ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ:ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 07-09-2025ರ ರವಿವಾರದಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್‌ರವರು ವಾರ್ಷಿಕ ವರದಿ, ಲೆಕ್ಕಪತ್ರಗಳನ್ನು ಮಂಡಿಸಿದರು.  ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 21,519 ಸದಸ್ಯರಿಂದ ರೂ. 4.83 ಕೋಟಿ ಪಾಲು ಬಂಡವಾಳ ಹಾಗೂ ರೂ. 573.19 ಕೋಟಿ ಠೇವಣಿ ಹೊಂದಿದ್ದು, ರೂ. 476.99 ಕೋಟಿ […]

ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ ತೂಕದ ಗಾಂಜಾ ವಶಪಡಿಸಿಕೊಂಡ ಪೊಲೀಸರು; ಇಬ್ಬರ ಬಂಧನ

ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ತಡೆದು 65 ಕೆ.ಜಿ‌‌ ತೂಕದ ಗಾಂಜಾವನ್ನು ವಶಕ್ಕೆ ಪಡೆದುಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ ಮನೋಜ್ (25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಹಿರಿಯಡಕ ಕಣಜಾರು ಗುರುರಾಜ್ ಮಂಜಿತ್ತಾಯರ ಮನೆಯ ಸಮೀಪದ ಹಾಡಿಯ ಬಳಿ ಶಿಕಾರಿ ಮಾಡುವ ಉದ್ದೇಶದಿಂದ ಹೋಗಿದ್ದರು. ಈ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರಿನ ಗಾಜಿಗೆ ತಾಗಿ, ಮರದ ಬಾಗಿಲಿಗೆ […]

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ ಸಾಗಾಣೆ: ವಾಹನಗಳಿಗೆ ಜಿಪಿಎಸ್ ಟ್ರ‍್ಯಾಕರ್, ಗೋದಮುಗಳಿಗೆ ಸಿಸಿಟಿವಿ ಕಡ್ಡಾಯ; ಸಿಎಂ ಖಡಕ್ ಸೂಚನೆ

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್‌ಗಳ ಆಪರೇಷನ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮುನಿಯಪ್ಪ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್ ಟ್ರ‍್ಯಾಕರ್, ಗೋದಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶಿಸಿದ್ದಾರೆ. ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. […]