ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿರುವುದು ಎಲ್ಲರಿಗೂ ತಿಳಿದಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು […]

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ಸೇವೆಗಳು

ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ಸೇವೆಗಳನ್ನು ಪ್ರಾರಂಭಿಸುವುದರೊಂದಿಗೆ ತನ್ನ ವೈದ್ಯಕೀಯ ಸೇವೆಗಳನ್ನು ವಿಸ್ತರಿಸುತ್ತಿದೆ. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮಾಜಿ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿರುವ, 30 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಡಾ. ಗಣೇಶ್ ಪೈ ಸಿ ಅವರು ಈ ವಿಭಾಗದ ನೇತೃತ್ವ ವಹಿಸಲಿದ್ದಾರೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಹೊರರೋಗಿಗಳ ಸಮಾಲೋಚನೆಗಳು ಲಭ್ಯವಿರುತ್ತವೆ. ಜಠರಗರುಳಿನ ಕಾಯಿಲೆಗಳು, ಗೆಡ್ಡೆಗಳು, […]

ಕಾರ್ಕಳ: ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಲು ಮತ್ತು ಬೆಳ್ಮಣ್ ಪ್ರದೇಶದ ಸುತ್ತಮುತ್ತಲಿನ ಶಿಕ್ಷಕರ ಸಮರ್ಪಣೆ ಮತ್ತು ಸೇವೆಯನ್ನು ಗೌರವಿಸಲು ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ದಿನಾಂಕ 09.09.2025ರಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಮುಲ್ಲಡ್ಕ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲ ಫಾದರ್ ಮಿಲ್ಟನ್ ಫೆರ್ನಾಂಡಿಸ್, ನಿವೃತ್ತ ಶಿಕ್ಷಕಿ ಮತ್ತು ಸೈಂಟ್ ಜೋಸೆಫ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮಾಜಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಡ್ವಿನ್ […]

ಉಡುಪಿ: ಅಶಕ್ತ ಕುಟುಂಬದ ವೈದ್ಯಕೀಯ ನೆರವಿಗಾಗಿ ವಿಭಿನ್ನ ವೇಷ ಧರಿಸಲು ಸಜ್ಜಾದ ಸುಷ್ಮಾ ಬಂಟ್ವಾಳ

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಅಶಕ್ತ ಕುಟುಂಬದ ವೈದ್ಯಕೀಯ ನೆರವಿಗಾಗಿ ಪ್ರಥಮ ಬಾರಿಗೆ ವಿಭಿನ್ನ ವೇಷ ಧರಿಸಿ ಮನೆ ಮನೆಗೆ ತೆರಳಿ ಸುಷ್ಮಾ ಬಂಟ್ವಾಳ ಅವರು ಧನ ಸಂಗ್ರಹಿಸಲು ಮುಂದಾಗಿದ್ದಾರೆ. ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸುಷ್ಮಾ ಬಂಟ್ವಾಳ‌ ಅವರು, 76 ಬಡಗಬೆಟ್ಟು ನಿವಾಸಿಗಳಾದ ಜಯಕರ ಬಂಗೇರ ಮತ್ತು ವಿಜಯಲಕ್ಷ್ಮೀ ಬಂಗೇರ ಅವರ ಇಬ್ಬರು ಮಕ್ಕಳಾದ ಕಿಶನ್‌ ಬಂಗೇರ ಮತ್ತು ಕಿರಣಾ ಬಂಗೇರ 9ನೇ ತರಗತಿವರೆಗೆ ಸಹಜವಾಗಿ ಎಲ್ಲರಂತೆ ಶಾಲೆಗೆ ಹೋಗಿ ಬರುತ್ತಿದ್ದರು. 14ನೇ […]