ಉಡುಪಿ:ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.14,15 ರಂದು ವಿಶೇಷ ಪೂಜೆ ಹಾಗೂ ಸ್ಪರ್ಧೆಗಳ ಆಯೋಜನೆ

ಉಡುಪಿ:ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇಲ್ಲಿ ದಿನಾಂಕ 14-09-2025ರ ಆದಿತ್ಯವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾತ್ರಿ 7.30ರಿಂದ ಭಜನೆ ನಂತರ ವಿಶೇಷ ಪೂಜೆ ಜರಗಲಿದೆ. ದಿನಾಂಕ 15-09-2025 ರ ಸೋಮವಾರ ವಿಟ್ಲಪಿಂಡಿ ಪ್ರಯುಕ್ತ ಅಪರಾಹ್ನ ಗಂಟೆ 3.00ರಿಂದ ವಿವಿಧ ಆಕರ್ಷಕ ಸ್ಪರ್ಧೆಗಳು ಜರಗಲಿವೆ. ರಸಪ್ರಶ್ನೆ,ಸಂಗೀತ ಕುರ್ಚಿ,ಇಡ್ಲಿ ತಿನ್ನುವುದು, ಚಮಚ ಲಿಂಬೆ ಓಟ, ಗೊಂಬೆಗೆ ತಿಲಕ ಹಚ್ಚುವುದು, ಆನೆಗೆ ಬಾಲ ಬಿಡಿಸುವುದು, ಪುಲ್ ಅಪ್, ಹಗ್ಗ ಜಗ್ಗಾಟ, ಮೊಸರು ಕುಡಿಕೆ ಒಡೆಯುವುದು ಇತ್ಯಾದಿ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ಜರಗಲಿವೆ. […]

ಬ್ರಹ್ಮಾವರ: ಯುವತಿಗೆ ಚೂರಿ ಇರಿದು ಹತ್ಯೆಗೈದು ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಉಡುಪಿ: ಮದುವೆಗೆ ಒಪ್ಪದ ಕಾರಣಕ್ಕಾಗಿ ಯುವತಿಗೆ ಚೂರಿ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ […]

ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್ ಗಳಲ್ಲಿ ಒಂದೇ ರೇಟು: ಮಲ್ಟಿಪ್ಲೆಕ್ಸ್ ಗಳ ಟಿಕೆಟ್ ಲೂಟಿಗೆ ಕಡಿವಾಣ ಹಾಕಿದ ರಾಜ್ಯ ಸರಕಾರ:

ಬೆಂಗಳೂರು:ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್ ಗಳಲ್ಲಿ ಜಾಸ್ತಿ ಟಿಕೇಟ್ ದರ ತೆಗೆದುಕೊಳ್ಳುವಂತಿಲ್ಲ. ರಾಜ್ಯ ಸರಕಾರದ ದರವನ್ನು ಫಾಲೋ ಮಾಡಬೇಕಾಗುತ್ತದೆ ಹಾಗಾಗಿ ಮಲ್ಟಿಪ್ಲೆಕ್ಸ್ ಥಿಯೇಟರ್ಗಳಲ್ಲಿ ನಡೆಯುತ್ತಿದ್ದ ಟಿಕೇಟ್ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿರುವುದು ಸಿನಿಮಾ ಪ್ರೇಮಿಗಳಲ್ಲಿ ಖುಷಿ ಮೂಡಿಸಿದೆ. ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ […]

ಗ್ರಾಮ ಪಂಚಾಯತಿ ಆಡಳಿತದಲ್ಲಿ ಸುಧಾರಣೆ ಕಂಡರಷ್ಟೇ ದೇಶದ ಅಭಿವೃದ್ಧಿ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ವತಿಯಿಂದ ‌ಮಹಿಳಾ‌ ಸ್ನೇಹಿ ನೀರೆ ಗ್ರಾಮ ಪಂಚಾಯತ್ ನ ನೂತನ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ‌ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಯನ್ನು ಉದ್ಘಾಟಿಸಿ, […]

ದೇಶವಿರೋಧಿ ಪೋಸ್ಟ್ ಹಂಚಿಕೊಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಶನ್ ಶೆಟ್ಟಿ ಬಂಧನಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ

ಉಡುಪಿ: ನೇಪಾಳ ಮಾದರಿಯಲ್ಲಿ ಭಾರತ ದೇಶದಲ್ಲಿಯೂ ಜನರು ದಂಗೆ ಹೇಳಬಹುದೆಂಬ ರೀತಿಯ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ರೋಶನ್ ಶೆಟ್ಟಿಯನ್ನು ಕೂಡಲೇ ಬಂಧಿಸಿ, ಆತನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಆಗ್ರಹಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಅವರು, ರೋಶನ್ ಶೆಟ್ಟಿ ಭಾರತದ ಸಾರ್ವಭೌಮತೆ, ಏಕತೆ […]