ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಗುಡ್ ನ್ಯೂಸ್: ವಯೋಮಿತಿಯನ್ನು ಸಡಿಲಿಸುವ ಬಗ್ಗೆ ಸರಕಾರ ಯೋಚನೆ

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸರಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆದಿಲ್ಲದ ಕಾರಣ, ಯುವಜನರಲ್ಲಿ ಈ ಬಗ್ಗೆ ಬಹಳಷ್ಟು ಆಕ್ರೋಶವಿತ್ತು. ಈ ಹಿನ್ನೆಲೆಯಲ್ಲಿ, ವಯೋಮಿತಿಯನ್ನು ಸಡಿಲಿಸುವ ಬಗ್ಗೆ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೇರೆ ರಾಜ್ಯಗಳಲ್ಲಿರುವ ವಯೋಮಿತಿ ನೀತಿಗಳನ್ನು ಅಧ್ಯಯನ ಮಾಡಿ, ಸೂಕ್ತವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ […]
ಉಡುಪಿ: ಸೆ.22ರಿಂದ ಇಂದ್ರಾಳಿ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ಸೆಪ್ಟೆಂಬರ್ 22 ರಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿದ್ದ ಕೆಳ ಪರ್ಕಳ […]
ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. […]
ಐ.ಎಂ.ಎ ಅಧ್ಯಕ್ಷರಾಗಿ ಡಾ.ಅಶೋಕ್ ಕುಮಾರ್ ಕಾಮತ್

ಉಡುಪಿ: ಇಂಡಿಯನ್ ಮೆಡಿಕಲ್ ಅಸೋಶಿಯೇಷನ್ ಉಡುಪಿ ಕರಾವಳಿ ಅಧ್ಯಕ್ಷರಾಗಿ ಮಕ್ಕಳ ತಜ್ಞ ಡಾ.ಅಶೋಕ್ ಕುಮಾರ್ ಕಾಮತ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಡಾ.ಮನಸ್ ಇ.ಆರ್, ಕೋಶಾಧಿಕಾರಿ ಡಾ. ಸನತ್ ರಾವ್, ಜೊತೆ ಕೋಶಾಧಿಕಾರಿ ಡಾ. ಕಿರಣ್ ಜೊತೆಕಾರ್ಯದರ್ಶಿ ಡಾ. ಸುಹಾನ್ ಎಸ್ ಶೆಟ್ಟಿ, ಹಾಗು 30ಜನ ಕಾರ್ಯಕಾರಿ ಮಂಡಳಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 5ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಪ್ರವೇಶಿಸಿದ 35 ಕೈದಿಗಳನ್ನು ಬಂಧಿಸಿದ ಭಾರತ!

ನವದೆಹಲಿ: ನೇಪಾಳದಲ್ಲಿ ಇತ್ತೀಚೆಗೆ ನಡೆದ ಯುವಜನರ ಭಾರೀ ಪ್ರತಿಭಟನೆಯಿಂದಾಗಿ ವಿವಿಧ ಜೈಲುಗಳಿಂದ ತಪ್ಪಿಸಿಕೊಂಡು ಅಕ್ರಮವಾಗಿ ಭಾರತ ಪ್ರವೇಶಿಸಿದ 35 ಕೈದಿಗಳನ್ನು ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ದೃಢಪಡಿಸಿದ್ದಾರೆ. 22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು, ಈ ಕೈದಿಗಳನ್ನು ಭಾರತ-ನೇಪಾಳ ಗಡಿಯಾದ್ಯಂತ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಇರಿಸಿದ್ದಾರೆ ಎಂದು ಎಎನ್‌ಐಗೆ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, […]