ಪಂಜಿಮಾರು- ಶಿರ್ವ-ಪಿಲಾರುಕಾನ ರಸ್ತೆಯ ದುರಸ್ತಿಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸಮಿತಿ ಶಿರ್ವ ವತಿಯಿಂದ ಪ್ರತಿಭಟನೆ

ಉಡುಪಿ: ಪಂಜಿಮಾರು- ಶಿರ್ವ-ಪಿಲಾರುಕಾನ ರಸ್ತೆಯ ದುರಸ್ತಿಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸಮಿತಿ ಶಿರ್ವ ವತಿಯಿಂದ ಶಿರ್ವ ನ್ಯಾರ್ಮ ಸೇತುವೆ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ತಾಪಂ ಸದಸ್ಯ ಮೈಕಲ್ ರಮೇಶ್ ಡಿಸೋಜ ಮಾತನಾಡಿ, ಶಾಸಕರು ತಮ್ಮ ಕಾರ್ಯಕರ್ತರ ಮನೆಗಳಿಗೆ ರಸ್ತೆ ಮಾಡುವುದನ್ನು ಬಿಟ್ಟು ಸಾರ್ವಜನಿಕರಿಗೆ ರಸ್ತೆಯನ್ನು ಮಾಡಿಕೊಡಿ ಎಂದು ಕಿಡಿಕಾರಿದರು. ಕಾಂಗ್ರೆಸ್ ಕಾಪು ಬ್ಲಾಕ್ ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಪ್ರತಿಭಟನೆಯ ಫಲವಾಗಿ […]
ಅಮೆರಿಕಾದಲ್ಲಿ ಪತ್ನಿ, ಮಗನ ಎದುರೇ ಕರ್ನಾಟಕದ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಅಮೆರಿಕದ ಡಲ್ಲಾಸ್ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ ಎಂದು ಗುರುತಿಸಿದ್ದು ಆತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. […]
ಮುಂದಿನ ಎರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಹಮಾಮಾನ ಇಲಾಖೆ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿರ ರಾಜ್ಯದ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಹೊರತು ಪಡಿಸಿ ಎಲ್ಲಾ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಹೊರತು ಪಡಿಸಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆಯಲ್ಲಿ ಭಾರೀ ಮಳೆಯಾಗಲಿದೆ. ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, […]