ಕೈರಂಗಳದಲ್ಲಿ ಯಕ್ಷಗಾನ ಅಕಾಡೆಮಿಯಿಂದ ಯಕ್ಷಧಾರೆ ಸಂಪನ್ನ

ಉಡುಪಿ: ಸರಕಾರ ಯಕ್ಷಗಾನ ಅಕಾಡೆಮಿಗೆ ನೀಡುವ ಅನುದಾನವನ್ನು ಯಕ್ಷಗಾನ ಕಲೆಯ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳನ್ನು ನಡೆಸುವ ಸಂಘಸoಸ್ಥೆಗಳಿಗೆ ತಲುಪಿಸಬೇಕು ಎಂಬುದೇ ಅಕಾಡೆಮಿಯ ಆಶಯವಾಗಿದೆ. ಯಕ್ಷಗಾನ ಕಲೆ ಇಂದು ದೇಶವಿದೇಶದಲ್ಲಿ ಇಷ್ಟೊಂದು ಜನಪ್ರಿಯತೆ ಪಡೆಯಲು ಕಾರಣ ಅದಕ್ಕೆ ಸಿಕ್ಕಿರುವ ಜನಾದಾರದ ಜೊತೆಗೆ ಕಲಾಪೋಷಕರ ಪಾತ್ರ ಹಿರಿದಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ದ.ಕ.ಜಿಲ್ಲೆಯ ಕೈರಂಗಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ […]
ಹೆಬ್ರಿ ಎಸ್ ಆರ್ ಪದವಿ ಪೂರ್ವ ಕಾಲೇಜಿನಲ್ಲಿ ಅನ್ವೇಷಣಾಂ – 25 ಕಾರ್ಯಕ್ರಮ

ಹೆಬ್ರಿ: ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಎಸ್ ಆರ್ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಅನ್ವೇಷಣಾಂ – 25 ಕಾರ್ಯಕ್ರಮವು ಶನಿವಾರ ಯಶಸ್ವಿಯಾಗಿ ನೆರವೇರಿತು. ಕೈಯಲ್ಲಿರುವ ಬೆರಳುಗಳು ಒಂದೇ ಸಮನಾಗಿರುವುದಿಲ್ಲ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸುಪ್ತವಾದ ಪ್ರತಿಭೆ ಅಡಗಿದೆ, ಅದು ಪ್ರಕಟಗೊಳ್ಳಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಅಂಕಗಳನ್ನು ಗಳಿಸುವ ಜೊತೆಯಲ್ಲೇ ಗುರುಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಅಡಗಿರುವ ಪ್ರತಿಭೆಯನ್ನು ಸಾಬೀತುಪಡಿಸಲು ಸಿಗುವ ಅವಕಾಶವನ್ನು ಬಳಸಿಕೊಳ್ಳಬೇಕು. ಸಮಾಜಕ್ಕೆ ಆಸ್ತಿಯಾಗಬೇಕು ಎಂದು ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ […]
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ.

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ […]
ಉಡುಪಿ: ಭಕ್ತ ಜನಸಾಗರದ ಮಧ್ಯೆ ವೈಭವದ ವಿಟ್ಲಪಿಂಡಿ ಉತ್ಸವ

ಉಡುಪಿ: ಪೊಡವಿಗೊಡೆಯ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವವು ಕೃಷ್ಣಮಠದಲ್ಲಿ ಸೋಮವಾರ ಭಕ್ತ ಜನಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು. ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಮಧ್ಯಾಹ್ನದ ಮಹಾಪೂಜೆ ನೆರವೇರಿಸಿದರು. ಬಳಿಕ ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ಇನ್ನೊಂದು ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಉತ್ಸವ ಮೂರ್ತಿನ್ನಿರಿಸಿ ಮೆರವಣಿಗೆ ನಡೆಸಲಾಯಿತು. ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪುತ್ತಿಗೆ […]
ಉಡುಪಿ:ಸಂವಿಧಾನ ಬದ್ಧ ಹಕ್ಕುಗಳ ಬಗ್ಗೆ ಅರಿವಿರಲಿ: ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಉಡುಪಿ: ಜನರಲ್ಲಿ ಸಂವಿಧಾನ ಬದ್ಧ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಅಂತರರಾಷ್ಟ್ರೀಯಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಜನಸಾಮಾನ್ಯರಿಗೆ ಪ್ರಜಾಪ್ರಭುತ್ವದ ಶಕ್ತಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಬೈಕ್ ಜಾಥಾ, ಛಾಯಾಚಿತ್ರ, ಚಿತ್ರಕಲೆ, ಭಾಷಣ ಸ್ಪರ್ಧೆ ಮತ್ತು ಸೈಕಲ್ ಜಾಥಾಗಳನ್ನು ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಬಗ್ಗೆ ಅರಿವು ಇದ್ದಾಗಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ […]