ಉಡುಪಿ:ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯವು ಇಂದಿನಿಂದ (ಸೆಪ್ಟಂಬರ್ 15) 45 ದಿನಗಳ ಕಾಲ ನಡೆಯಲಿದ್ದು, ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಸಮೀಕ್ಷಾಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಮೀಕ್ಷಾದಾರರಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸರ್ವೇ ನಡೆಸುವ ಕುರಿತು ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಯ ಅಧ್ಯಕ್ಷತೆ […]
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು (ಸೆ.16) ಕೊನೆಯ ದಿನ; ಕೂಡಲೇ ಸಲ್ಲಿಸಿ!

ಆದಾಯ ತೆರಿಗೆ ಇಲಾಖೆಯು 2025-26 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಅಂತಿಮ ದಿನ ಮತ್ತು ಗಡುವನ್ನು ಒಂದು ದಿನಕ್ಕೆ ವಿಸ್ತರಣೆ ಮಾಡಿದೆ. ಜ.31 ರಂದು ನಿಗದಿಯಾಗಿದ್ದ ದಿನಾಂಕವನ್ನು 2025ರ ಸೆಪ್ಟೆಂಬರ್ 15 ರವರೆಗೆ ಈ ಹಿಂದೆ ವಿಸ್ತರಿಸಲಾಗಿದೆ. ಇದೀಗ ಸೆ.16ರಂದು ಅಂದರೆ ಇಂದು ಮಂಗಳವಾರ ಅಂತಿಮ ದಿನಾಂಕ ಎಂದು ಇಲಾಖೆ ತಿಳಿಸಿದೆ. ಇನ್ನು ಈ ಕುರಿತು ಆದಾಯ ತೆರಿಗೆ ಇಲಾಖೆಯ ತಮ್ಮ ಎಕ್ಸ್ ಹ್ಯಾಂಡಲ್ನಲ್ಲಿ ಸೆ.15 ರಾತ್ರಿ 11.48ಕ್ಕೆ ಪೋಸ್ಟ್ ಹಂಚಿಕೊಂಡಿದೆ. ಆದಾಯ […]
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೊ ಅಲರ್ಟ್’ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಕನ್ನಡ, […]