ಉಡುಪಿ:ಹಿರಿಯ ನಾಗರಿಕರರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರೀಯವಾಗಿ ಭಾಗವಹಿಸುವುದರಿಂದ ನೆರೆಹೊರೆಯವರೊಂದಿಗೆ ಉತ್ತಮ ಭಾಂದವ್ಯ ಹೊಂದುವುದರೊಂದಿಗೆ ಜೀವನೋತ್ಸಾಹ ಹೆಚ್ಚುವಂತೆ ಮಾಡುತ್ತದೆ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ […]

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆ.

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಕಾಲೇಜು ಪ್ರಾoಶುಪಾಲ ಜಗದೀಶ ಕುಮಾರ್ ರವರಿಗೆ ಹಸ್ತಾಂತಿಸಿದರು. ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಂಘಟನಾ ಕಾರ್ಯದರ್ಶಿ ಸತೀಶ್ ಕೊಡವೂರು, ದೀಪಾ ಕರ್ಕಿ, ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿ ಭವ್ಯಾ ನಾಗರಾಜ ಎನ್. ಎಸ್. ಎಸ್. ನಾಯಕಿ ಮೇಘಾ ಹಾಗು ಉಪನ್ಯಾಸಕಿ ಸುಧಾ ಆಡುಕಳ ಉಪಸ್ಥಿತರಿದ್ದರು.