ಹಣಕಾಸಿನ ಮಾಹಿತಿ ಕೂಡಲೇ ಒದಗಿಸಿ: ವಿವಿಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳ ಪ್ರಸ್ತುತ ಆರ್ಥಿಕ ಸ್ಥಿತಿಗತಿ, ಬ್ಯಾಂಕ್ ಖಾತೆಯಲ್ಲಿನ ಮಾಹಿತಿ, ಠೇವಣಿ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದೆ. ವೇತನ, ಅಭಿವೃದ್ಧಿ ಕಾರ್ಯ, ನಿವೃತ್ತ ನೌಕರರಿಗೆ ಪಿಂಚಣಿ ನೀಡಲು ಸಹ ಹಲವು ವಿಶ್ವವಿದ್ಯಾಲಯಗಳಲ್ಲಿ ಹಣವಿಲ್ಲ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ನಡೆಸಿದ ಅಧ್ಯಯನ ವರದಿ ಪ್ರಕಾರ ಕನಿಷ್ಠ 13 ವಿಶ್ವವಿದ್ಯಾಲಯಗಳ ಸಿಬ್ಬಂದಿಯ ನಿವೃತ್ತಿ ಪಿಂಚಣಿ ಬಾಕಿಯೇ ₹562 ಕೋಟಿ ಇದೆ. ಬೆಂಗಳೂರು, ಧಾರವಾಡ ಸೇರಿದಂತೆ ಹಲವು […]
ದ.ಕ., ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’; ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸ್ಪಂದನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು (Manjunath Bhandari) ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಯ ಪ್ರವಾಸಿ ತಾಣಗಳ (Tourist Place) ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ […]
ಸೆ. 22ರಿಂದ ಅ.2ರ ವರೆಗೆ “ಉಡುಪಿ-ಉಚ್ಚಿಲ ದಸರಾ-2025”

ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀಕ್ಷೇತ್ರ ಉಚ್ಚಿಲ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಾಲ್ಕನೇ ವರ್ಷದ “ಉಡುಪಿ-ಉಚ್ಚಿಲ ದಸರಾ-2025” ಸೆ. 22ರಿಂದ ಅ. 2ರ ವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು. ಉಚ್ಚಿಲ ಮೊಗವೀರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
ಉಡುಪಿ:ರೋಟರಿ ಉದ್ಯೋಗ್ –ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರ ಉದ್ಘಾಟನೆ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ (IRCS, K58) ಮತ್ತು ರೋಟರಿಬೆಂಗಳೂರು ಉದ್ಯೋಗಗಳ ಸಹಯೋಗದಲ್ಲಿ, ರೋಟರಿ ಉದ್ಯೋಗ್ ರೆಡ್ ಕ್ರಾಸ್ ರಕ್ತ ಕೇಂದ್ರವನ್ನು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಎಲ್‌ಇ (ರವಿ ಕಿರ್ಲೋಸ್ಕರ್) ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗೌರನಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹೋಟ್ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದ ಅವಶ್ಯಕತೆ ಮತ್ತು ಸುರಕ್ಷಿತ ರಕ್ತಸಂಗ್ರಹಣೆಯ ಮಹತ್ವವನ್ನು ವಿವರಿಸಿಸಿ, ರೋಟರಿ ಮತ್ತು ರೆಡ್‌ಕ್ರಾಸ್ ಸಂಸ್ಥೆಗಳ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು. ರೋಟರಿಯನ್ […]
ಉಡುಪಿ:ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಉಡುಪಿ: ಭಗವಂತನ ಶ್ರೀ ಕೃಷ್ಣನ ಅವತಾರವು ವಿಶಿಷ್ಟವಾದದ್ದು. ಕೃಷ್ಣನ ರೂಪದಂತೆ ಆತನ ಅವತಾರವೂಆಕರ್ಷಕ. ಕೆಟ್ಟದನ್ನು ದಮನ ಮಾಡಿ ಜಗತ್ ಕಲ್ಯಾಣಕ್ಕಾಗಿ ಉತ್ತಮ ಮಾರ್ಗವನ್ನು ನೀಡಿದ ಶ್ರೀ ಕೃಷ್ಣನ ಸಂದೇಶ ಪಾಲನೆಯಿಂದ ಜಗತ್ತಿನ ಸುಸೂತ್ರ ನಿರ್ವಹಣೆ ಸಾಧ್ಯ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ರವಿವಾರ ರಾಜಾಂಗಣದ ಶ್ರೀ ಕೃಷ್ಣ ಮಠದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿ […]