ಆಗುಂಬೆ ಘಾಟಿ ತಿರುವಿನಲ್ಲಿ ಭಾರೀ ಭೂ ಕುಸಿತ: ಮರ ಬಿದ್ದು ವಾಹನ ಸಂಚಾರ ಸ್ಥಗಿತ.

ಶಿವಮೊಗ್ಗ: ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾದ ಘಟನೆ‌ ಶುಕ್ರವಾರ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ ವಾಗಿದ್ದು, ರಸ್ತೆ ಮೇಲೆ ಧರೆಯ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ. ಇನ್ನು ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. […]

ಬೈಂದೂರು ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದನ್ನು ವಿರೋಧಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಸಂಖ್ಯೆಯ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕುಳಿತು ಶಾಲನ್ನು ತಿರುಗಿಸುತ್ತ ಘೋಷಣೆಗಳನ್ನು ಕೂಗಿದರು. ಕೆಲವರು ರಸ್ತೆಯಲ್ಲಿಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಗೇಟಿನ ಮುಂದೆ ಹಡಿ ಮಂಚದಲ್ಲಿ […]

ಪಡುಬಿದ್ರಿ: ಮಾದಕ ದ್ರವ್ಯ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಯುವಕರ ಬಂಧನ

ಉಡುಪಿ: ಪಡುಬಿದ್ರಿ ಬಡಾ ಗ್ರಾಮದ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ಮಸೀದಿ ಬಳಿಯ ನಿವಾಸಿ ಫರ್ಹಾನ್ (27) ಹಾಗೂ ಕಾಪು ಕೊಂಬಗುಡ್ಡೆ ನಿವಾಸಿ ಮಹಮ್ಮದ್ ಹಾಸಿಂ (21) ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 30 ಸಾವಿರ ರೂ. ಮೌಲ್ಯದ 9.37 ಗ್ರಾಂ ತೂಕದ ಎಂಡಿಎಂಎ ಮಾತ್ರೆ ಗಳ ಪ್ಯಾಕೆಟ್‌ಗಳು, 5 ಸಾವಿರ ರೂ. ನಗದು, ವಿವೋ ಕಂಪೆನಿಯ […]

ಉಡುಪಿ-ದ.ಕ ಜಿಲ್ಲೆಗಳ ರಸ್ತೆಗಳನ್ನು ಶೀಘ್ರವೇ ದುರಸ್ತಿಗೊಳಿಸುವಂತೆ ಸಿಎಂ ಗೆ ಶಾಸಕ ಮಂಜುನಾಥ ಭಂಡಾರಿ ಮನವಿ: ಹಲವು ರಸ್ತೆ ಸಮಸ್ಯೆಗಳ ಬಗ್ಗೆ ಸಿಎಂ ಗೆ ಮಹತ್ವದ ಪತ್ರ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ವಾಹನಗಳ ಸಂಚಾರ ದಟ್ಟಣೆಯಿಂದದ ಗ್ರಾಮೀಣ ಹಾಗೂ ನಗರ ಪ್ರದೇಶದ ಹೆಚ್ಚಿನ ರಸ್ತೆಗಳು, ರಾಜ್ಯ ಹೆದ್ದಾರಿಗಳು ಮತ್ತು ರಾಷ್ಟ್ರೀಯಯ ಹೆದ್ದಾರಿಗಳು ಹಾಳಾಗಿವೆ. ಕೂಡಲೇ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಶಾಸಕರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಗಳು ಮತ್ತು ಸರ್ವಿಸ್ ರಸ್ತೆಗಳು ಹಾಳಾಗಿದ್ದು ಹಲವಾರು ವಾಹನ […]

ಪ್ರಿಯಕರನಿಗಾಗಿ ಪುಟ್ಟ ಮಗಳನ್ನೇ ನೀರಿಗೆ ಎಸೆದು ಬಿಟ್ಟ ಮಹಾತಾಯಿ!

ರಾಜಸ್ಥಾನ: ಪ್ರಿಯಕರನಿಗೋಸ್ಕರ ತನ್ನ ಪತಿಯಿಂದ ಪಡೆದಿದ್ದ ಮೂರು ವರ್ಷದ ಮಗಳನ್ನು ಸರೋವರಕ್ಕೆ ಎಸೆದು ಕೊಲೆ ಮಾಡಿದ ಮಹಿಳೆಯನ್ನು ಅಜ್ಮೇರ್ ಪೋಲಿಸರು ಬಂಧಿಸಿದ್ದಾರೆ. ಮಹಿಳೆ ಮೂಲತಃ ಉತ್ತರ ಪ್ರದೇಶದ ವಾರಣಾಸಿ ನಿವಾಸಿ ಅಂಜಲಿ(28). ಪತಿಯಿಂದ ಪ್ರತ್ಯೇಕಗೊಂಡ ಬಳಿಕ ಅಜ್ಮೇರ್‌ಗೆ ಸ್ಥಳಾಂತರಗೊಂಡು ತನ್ನ ಪ್ರಿಯಕರ ಅಲ್ಕೇಶ್ ಜೊತೆ ವಾಸವಾಗಿದ್ದಳು. ಆಕೆ ಹೋಟೆಲ್‌ವೊಂದರಲ್ಲಿ ಸ್ವಾಗತಕಾರ್ತಿಯಾಗಿ ಕೆಲಸ ಮಾಡುತ್ತಿದ್ದು, ಅಲ್ಕೇಶ್ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದಾನೆ. ಮಂಗಳವಾರ ರಾತ್ರಿ ಮಗುವಿಗೆ ಜೋಗುಳ ಹಾಡಿ ಅದು ನಿದ್ರೆಗೆ ಜಾರುತ್ತಿದ್ದಂತೆ ಅದನ್ನೆತ್ತಿಕೊಂಡು ಸರೋವರವೊಂದರ ಬಳಿ ವಾಕಿಂಗ್‌ಗೆ […]