ಉಡುಪಿ:ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿ ನಿಮಿತ್ತ ಪ್ರತಿ ವರ್ಷ ಅಕ್ಟೋಬರ್ 2 ನೇ ತಾರೀಕನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ […]

ಉಡುಪಿ:ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಿಜೂರು ಹೋಸ್ಕೋಟೆಯು ಉತ್ಕೃಷ್ಟ ಸಭಾಭವನದಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಉಪ ಯೋಜನಾ ನಿರ್ದೇಶಕ (ಆತ್ಮ) ಡಾ. ರಾಜೇಶ್ ಡಿ.ಪಿ. ಮಾತನಾಡಿ, ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ರೈತರಿಗೆ ಖರ್ಚು ಕಡಿಮೆಯಾಗಲಿದೆ. ರೈತರು ಕಡಿಮೆ […]

ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಗೆ ಜನ ಬೇಕಾಗಿದ್ದಾರೆ

ಕಿನ್ನಿಗೋಳಿ ಬಳಿ ಇರುವ ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಗೆ 25-45 ವರ್ಷ ವಯೋಮಿತಿಯ ಪುರುಷರು ಲೈನ್ ಸೇಲ್ಸ್ ಮ್ಯಾನ್ (Line Salesman) ಹುದ್ದೆಗೆ ಬೇಕಾಗಿದ್ದಾರೆ.PF, ESI ವಸತಿ ಊಟದೊಂದಿಗೆ ಉತ್ತಮ ವೇತನ ನೀಡಲಾಗುವುದು .ಸಂಪರ್ಕಿಸಿ : 9035032064

ಉಡುಪಿ:ಸರಳ ವಿವಾಹಕ್ಕೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ […]

ಉಡುಪಿ:ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರನೇಮಕಾತಿಗೆ ಸಂದರ್ಶನವು ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ, ಉತ್ತಮ ಸಂವಹನ ಕೌಶಲ್ಯ ಹಾಗೂ ವಿಮಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹರು ಸಂದರ್ಶನ ನಡೆಯುವ ದಿನದಂದು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ […]