ಮಟ್ಟು ಬೀಚ್ ನಲ್ಲಿ ಈಜಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

ಉಡುಪಿ: ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ. ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಎಂದು ಗುರುತಿಸಲಾಗಿದೆ. ಮಣಿಪಾಲದಿಂದ ಮಟ್ಟು ಬೀಚ್ ಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಈ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದರು. ಬಳಿಕ ವಿದ್ಯಾರ್ಥಿಗಳು ಅಲ್ಲಿಂದ ಬೇರೊಂದು ಸಮುದ್ರ […]
ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ‘ಪ್ರೊವಿನಿಯೋ 2.0’: ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಮೂಡುಬಿದಿರೆ: ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪಥಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ. ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು. ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ ವಿಷಯವನ್ನು ಪರಿಚಯಿಸಿರುವುದು ಉತ್ತಮ […]
ಸೆ.22 ರಿಂದ ಅ.22 ರವರೆಗೆ ಅದ್ದೂರಿಯ ಉಚ್ಚಿಲ ದಸರಾ ಮಹೋತ್ಸವ

ಉಡುಪಿ: ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಉಡುಪಿ -ಉಚ್ಚಿಲ ದಸರಾ- 2025 ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಗೌರವ ಸಲಹೆಗಾರ ಜಿ.ಶಂಕರ್ ತಿಳಿಸಿದ್ದಾರೆ. ದೇವಸ್ಥಾನದ ಮೊಗವೀರ ಭವನದಲ್ಲಿ ಬುಧವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರು ಹಾಗೂ […]
ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ :ವಾರ್ಷಿಕ ಮಹಾಸಭೆ;ಶೇ.9 ಡಿವಿಡೆಂಡ್ ಘೋಷಣೆ

ಉಡುಪಿ: ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇವರ 2024 -25ರ ವಾರ್ಷಿಕ ಮಹಾಸಭೆಯು ಸೆ.20ರಂದು ಶ್ರೀ ಕೃಷ್ಣ ಪ್ರಜ್ಞ ಪ್ರತಿಷ್ಠಾನ ಕಲ್ಸಂಕ ಇಲ್ಲಿ ನಡೆಯಿತು .ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸತ್ಯಪ್ರಸಾದ್ ಶೆಣೈ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಸಂಸ್ಥೆಯು ಉತ್ತಮ ವ್ಯವಹಾರ ಮಾಡಿದ್ದು ಭವಿಷ್ಯದಲ್ಲಿ ಇನ್ನೂ ಹೆಚ್ಚು ಹೆಚ್ಚು ಸಂಘದ ವತಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಆರನೇ ಸ್ಥಾನ ಹಾಗೂ ಬೇರೆ ಬೇರೆ […]
ತಂಗಳು ಅನ್ನ ಎಂದು ಸಸಾರ ಮಾಡ್ತೀರಾ? : ತಂಗಳನ್ನ ಆರೋಗ್ಯಕ್ಕೆ ಎಷ್ಟೊಂದು ಶಕ್ತಿ ಕೊಡುತ್ತೆಂದು ನಿಮಗೆ ಗೊತ್ತಾ?

ತುಂಬಾ ಮಂದಿಗೆ ತಂಗಳು ಅನ್ನವೆಂದರೆ ತಾತ್ಸಾರ ಭಾವನೆ. ಕೆಲವರಿಗೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ಭಾವನೆ ಬೆಳೆದುಬಿಟ್ಟಿದೆ. ಹಾಗಾಗಿ ತಂಗಳು ಅನ್ನವನ್ನು ಬಿಸಾಕುವವರೇ ಜಾಸ್ತಿ. ಆದರೆ ನೆನಪಿರಲಿ ಇಂತಹ ತಂಗಳನ್ನದಲ್ಲೂ ಇದೆ ಆರೋಗ್ಯಕ್ಕೆ ಪೂರಕವಾಗುವ ಅಂಶಗಳು! ಹೌದು. ತಂಗಳನ್ನ ಜೀರ್ಣಕ್ರಿಯೆಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಸಾಕಷ್ಟು ಪೋಷಕಾಂಶಗಳನ್ನು ಹೊಂದಿದೆ. ಅಲ್ಲದೇ ಇದರಿಂದ ಹಲವಾರು ಪ್ರಯೋಜನಗಳಿವೆ. ಹೀಗಾಗಿ ಇನ್ಮುಂದೆ ತಂಗಳು ಅನ್ನವನ್ನು ಎಸೆಯುವ ಮುನ್ನ ಇದರಿಂದ ಆಗುವ ಉಪಯೋಗಗಳೇನು ಎಂಬುದನ್ನು ತಿಳಿದುಕೊಳ್ಳಿ.