ಕ್ರೈಸ್ಟ್ಕಿಂಗ್: ವಾಲಿಬಾಲ್ ಪಂದ್ಯಾಟದಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಅದಮಾರು, ಕಾಪು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕ್ರೈಸ್ಟ್‍ಕಿಂಗ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡ ಪ್ರತಿನಿಧಿಸಿದ್ದ ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ಹಾಗೂ ಪ್ರಥಮ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 15 ಮತ್ತು 16 ಸೆಪ್ಟೆಂಬರ್ 2025 ರಂದು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬಹುಮಾನ ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗವು ಎರಡನೇ ಸ್ಥಾನ ಪಡೆದರೆ, ಪರುಷರ ವಿಭಾಗವು ತೃತೀಯ ಸ್ಥಾನವನ್ನು ಪಡೆದಿದೆ. ಮಹಿಳೆಯರ ವಿಭಾಗವು ದಿನಾಂಕ 22 ಮತ್ತು 23 […]
ಉಡುಪಿ:ಯುವಜನರು ಮಾದಕ ವಸ್ತುಗಳ ಬಳಕೆಯಿಂದ ದೂರವಿರುವಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಾದಕ ವಸ್ತುಗಳ ಸೇವನೆಯು ಯುವಜನರ ಭವಿಷ್ಯದ ಜೀವನವನ್ನು ಹಾಳುಮಾಡುತ್ತದೆ. ಮಾದಕವ್ಯಸನಕ್ಕೆ ಒಳಗಾದ ಯುವಕರು ಅದರಿಂದ ಹೊರಬಂದು ಕ್ರಮಬದ್ಧ ಶಿಸ್ತು ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಶಿಕ್ಷಣದಿಂದ ವಂಚಿತರಾಗುವುದರೊಂದಿಗೆ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಹೀಗಾಗದಂತೆ […]
ಹೆಮ್ಮಾಡಿ ವಿದ್ಯಾರ್ಥಿ ನಾಪತ್ತೆ; ಗಂಗೊಳ್ಳಿ ನದಿತೀರದಲ್ಲಿ ಮೃತದೇಹ ಪತ್ತೆ

ಉಡುಪಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಕಾಲೇಜಿನಿಂದ ಹೊರಟಿದ್ದ ನಮೇಶ್, ಮನೆಗೆ ವಾಪಾಸಾಗದೆ ನಾಪತ್ತೆಯಾಗಿದ್ದ. ಬೈಕ್ ಹಾಗೂ ಕಾಲೇಜು ಬ್ಯಾಗ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿತೀರದಲ್ಲಿ ಪತ್ತೆಯಾಗಿದ್ದು, ಇದರಿಂದ ಆತ ನದಿಗೆ ಬಿದ್ದಿರಬಹುದೆಂಬ ಶಂಕೆ ಮೂಡಿತ್ತು. ಕುಟುಂಬದ ದೂರು ಆಧರಿಸಿ ಕುಂದಾಪುರ ನಗರ ಠಾಣೆ […]
ಉಡುಪಿ:ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಉದ್ದಿಮೆ ಪರವಾನಿಗೆಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಹೊಂದಬೇಕು ಎಂಬ ನಿಯಮ ಜಾರಿಯಲ್ಲಿದ್ದು, ಪ್ರಸ್ತುತ ಪ್ರಗತಿಯು ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಪ್ರತ್ಯೇಕ ಪರವಾನಿಗೆ ಹೊಂದುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಶುನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಶಾಲಾ-ಕಾಲೇಜುಗಳ […]