ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಯಶಸ್ವಿ ಥ್ರೋಬಾಲ್ ಪಂದ್ಯಾಟ.

ಕುಂದಾಪುರ: ಸೆಪ್ಟೆಂಬರ್ 18 ರಂದು ಶಾಲಾ ಶಿಕ್ಷಣ ಇಲಾಖೆ (ಉಡುಪಿ ಜಿಲ್ಲೆ ) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇದರ ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ್ ಕುಮಾರ್ ಶೆಟ್ಟಿ ದೀಪ ವನ್ನು ಪ್ರಜ್ವಲಿಸಿ, ವಿದ್ಯಾರ್ಥಿಗಳು ಕ್ರೀಡೆ ಯಲ್ಲಿ ಕ್ರೀಡಾ ಸ್ಪೂರ್ತಿಯಿಂದ ಸಕ್ರಿಯವಾಗಿ […]

ಕೊಡವೂರು ಶಂಕರನಾರಾಯಣ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ

ಮಲ್ಪೆ, ಸೆ.20: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 7ಗಂಟೆಗೆ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಜರಗಲಿದೆ. ನವರಾತ್ರಿಯ ಪ್ರತಿದಿನವು ಚಂಡಿಕಾ ಹೋಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ”

ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 22ರಂದು ಬೆಳಿಗ್ಗೆ 9ಗಂಟೆಗೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಪ್ರತೀ ದಿನ ದುರ್ಗಾಹೋಮ, ಅಕ್ಟೋಬರ್ […]

ಉಚ್ಚಿಲ ದಸರಾ ಮಹೋತ್ಸವ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಸೆಪ್ಟೆಂಬರ್ 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್ ಪಾಲ್ ಸುವರ್ಣ

ಉಡುಪಿ: ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2025 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಸೆಪ್ಟೆಂಬರ್ 27 ಶನಿವಾರ ಬೆಳಿಗ್ಗೆ 9.30ಕ್ಕೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ. ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ […]

ಗ್ಯಾರಂಟಿ ಯೋಜನೆಗಾಗಿ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರಕಾರ: ಯಶ್ ಪಾಲ್ ಸುವರ್ಣ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರಕಾರ ಯಾವುದೇ ಪೂರ್ವ ತಯಾರಿಯಿಲ್ಲದೆ ಚುನಾವಣಾ ದೃಷ್ಟಿಯಿಂದ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅವೈಜ್ಞಾನಿಕ ರೀತಿಯಲ್ಲಿ ಅನುಷ್ಠಾನ ಮಾಡಲು ಮುಂದಾದ ಪರಿಣಾಮ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಹಂತ ತಲುಪಿದೆ. ಇದೀಗ ಈ ಮುಜುಗರದಿಂದ ಪಾರಾಗಲು ಬಡವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಬಡವರ ಹೊಟ್ಟೆಗೆ ಹೊಡೆಯಲು ಸಿದ್ದರಾಮಯ್ಯ ಸರಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಪ್ರತಿ ಪಡಿತರ […]