ರಾಜ್ಯದಲ್ಲಿ 9 ಮುಜರಾಯಿ ವ್ಯಾಪ್ತಿಯ ದೇಗುಲಗಳ ಸೇವಾಶುಲ್ಕ ಹೆಚ್ಚಳ!

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ದೇವರ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನು, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ […]