ಹಾಸನ: ಕಲ್ಲಿನ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು; ತಪ್ಪಿತ್ತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರ ಆಗ್ರಹ.

ಹಾಸನ: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತದೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ […]

ಬಿಜೆಪಿ ಯುವ ಮೋರ್ಚಾ ಕುಂದಾಪುರ ವತಿಯಿಂದ ಬ್ರಹತ್ ರಕ್ತ ದಾನ ಶಿಬಿರ – 75 ಯೂನಿಟ್ ರಕ್ತ ಸಂಗ್ರಹಣೆ.

ಕುಂದಾಪುರ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಯವರ 75 ನೇ ಜನ್ಮದಿನಾಚರಣೆ ಪ್ರಯುಕ್ತ ದೇಶದದ್ಯಾoತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅನ್ವಯ ಕುಂದಾಪುರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಬ್ರಹತ್ ರಕ್ತ ದಾನ ಶಿಬಿರವು ಜರಗಿತು. ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರದ ಅಧ್ಯಕ್ಷ ತೆಯನ್ನು ಮಂಡಲ ಯುವ ಮೋರ್ಚಾ ಅಧ್ಯಕ್ಷರರಾದ ಕಿರಣ್ ಪೂಜಾರಿ ತೆಕ್ಕಟ್ಟೆಯವರು ವಹಿಸಿದ್ದರು. […]

ಕರಾವಳಿಯ ಕಂಬಳ ರಾಜ್ಯ ಕ್ರೀಡೆ ಮಾನ್ಯತೆಯ ಅಂತಿಮ ಪಟ್ಟಿಯಲ್ಲಿ! ಕಂಬಳ ಪ್ರಿಯರು ಖುಷ್

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಿತಿಯ […]