ಉಡುಪಿ:ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ತೆರವಾಗಿರುವ ಸಂಸ್ಥೆಗಳು: ಕುಂದಾಪುರ ಸಾರ್ವಜನಿಕ ಆಸ್ಪತ್ರೆ-1, ಕಾರ್ಕಳ ಸಾರ್ವಜನಿಕ ಆಸ್ಪತ್ರೆ-2ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ-1, ಬೈಂದೂರು ಸಮುದಾಯ ಆರೋಗ್ಯ ಕೇಂದ್ರ-1, ದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರ-1, ಸಂಚಾರಿ ಗಿರಿಜನ ಆರೋಗ್ಯ ಘಟಕ-1ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂ.ಸಂ: […]
ಉಡುಪಿ:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: 2025-26 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ 8 ನೇ ತರಗತಿಯಲ್ಲಿ ಓದುತ್ತಿರುವ 3,50,000 ರೂ.ವರೆಗೆ ಕೌಟುಂಬಿಕ ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.30 ರೊಳಗೆ ಎನ್.ಎಂ.ಎಂ.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯ ಶಿಕ್ಷಕಿಯನ್ನು ಭೇಟಿಯಾಗುವಂತೆ ಅಥವಾ ಡಯಟ್ ನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಇವರನ್ನು ದೂ.ಸಂ.9449449602 ಮೂಲಕ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಮಲ್ಪೆ ಬೀಚ್ ನಲ್ಲಿ ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನಾಚರಣೆ

ಉಡುಪಿ: ವಿಶ್ವಾದ್ಯಂತ ಪ್ರತೀವರ್ಷ ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು ಶನಿವಾರಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಕರಾವಳಿಯ ಪ್ರಮುಖ ಸಮುದ್ರ ತೀರ ಪ್ರದೇಶಗಳಾದ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ, ಕೋಡಿ, ತ್ರಾಸಿ-ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೀಚ್ ಸ್ವಚ್ಚತಾ […]
ಉಡುಪಿ:ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದ್ದು, ಇವುಗಳಿಂದ ಸಾರ್ವಜನಿಕರಿಗೆ ತೊಂದರೆಉಂಟಾಗುತ್ತಿವೆ ಇವುಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಸಮಿತಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ದಿನೇದಿನೇ ನಾಯಿಗಳ ಸಂಖ್ಯೆ ಹೆಚ್ಚುತ್ತಿವೆ. ರಾತ್ರಿ ಸಮಯದಲ್ಲಿ ರೈಲು ಮತ್ತು ಬಸ್ಸಿನಲ್ಲಿ ಪ್ರಯಾಣಿಸಿ ಬಂದAತಹಸಾರ್ವಜನಿಕರ ಮೇಲೆ ಎರಗುತ್ತವೆ ಎಂಬ ದೂರುಗಳು […]
ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಸಂಭ್ರಮ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನವ ರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಧಾರ್ಮಿಕ ಸಾಂಸ್ಕೃತಿಕ ಸಭಾ ಕಾರ್ಯಕ್ರಮಗಳು, ಹಾಗೂ ನಿರಂತರ ಅನ್ನಸಂತರ್ಪಣೆಯೊಂದಿಗೆ ಬಹು ವಿಜೃಂಭಣೆಯಿಂದ ನೆರವೇರಲಿದೆ. ಧಾರ್ಮಿಕ ಕಾರ್ಯಕ್ರಮವಾಗಿ ದಿನಂಪ್ರತಿ ಭಕ್ತರ ಸೇವಾ ರೂಪದ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ ರಂಗಪೂಜೆ, ದೀಪಾರಾಧನೆ ತುಲಾಭಾರ ಸೇವೆ ವಿದ್ಯಾರಂಭಗಳು ನೆರವೇರಲಿದೆ. ತಾರೀಕು 24ರಂದು […]