ಸೆ.22 ರಿಂದ ಅ.2 ರವರೆಗೆ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವ.

ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಸೆ. 22ರಿಂದ ಮೊದಲ್ಗೊಂಡು ಅ. 2 ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವ ಹಾಗೂ ಅ. 7 ರಂದು ಚಂಡಿಕಾಯಾಗ ಪೂರ್ಣಾಹುತಿ, ಅನ್ನಸಂತರ್ಪಣೆ ನಡೆಯಲಿದೆ. ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಸೆ. 22ರಿಂದ ಅ. 2 ರವರೆಗೆ ಪ್ರತೀ ದಿನ ಶ್ರೀ ದೇವಿ ಮಹಾತ್ಮ ಪಾರಾಯಣ, ನವದುರ್ಗಾ ಪೂಜೆ, ಪ್ರಸನ್ನ ಪೂಜೆ, ಗದ್ದಿಗೆ ಪೂಜೆ ಮತ್ತು ಹೂವಿನ ಪೂಜೆ, ಭಜನಾ ಕಾರ್ಯಕ್ರಮ ನಡೆಯಲಿದೆ. ಸೆ 23ರಂದು ಕದಿರು ಕಟ್ಟುವುದು, ಸೆ. 29ರಂದು […]

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರ ವರೆಗೆ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಕಮಲಶಿಲೆ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರ ವರೆಗೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಈ ಕ್ಷೇತ್ರಕ್ಕೆ ತಾವೆಲ್ಲರೂ ತಮ್ಮ ಇಷ್ಟಮಿತ್ರ, ಬಂಧು-ಬಾಂಧವರೊಡಗೂಡಿ ಆಗಮಿಸಿ, ಶ್ರೀ ಸನ್ನಿಧಿಯಲ್ಲಿ ನಡೆಯುವ ಪೂಜಾ ಉತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ, ಈ ಪ್ರಸನ್ನ ಕಾಲದಲ್ಲಿ ಶ್ರೀ ಮುಡಿ ಗಂಧ ಪ್ರಸಾದಗಳನ್ನು ಸ್ವೀಕರಿಸಿ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸಂಪೂರ್ಣ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, […]

ಸೆ.22 ರಿಂದ ಅ.02 ರವರೆಗೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಶ್ರೀ ಕ್ಷೇತ್ರ ಮಂದಾರ್ತಿ, ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ನವರಾತ್ರಿ ವಿಶೇಷ ಪೂಜಾ ಸಮಾರಂಭವು ಸೆ. 22 ರಿಂದ ಅ.02 ರ ವರೆಗೆ ನಡೆಯಲಿದ್ದು, ಸೆ. 29, ಸೋಮವಾರ ಮೂಲ ನಕ್ಷತ್ರ ದಿನ ದೇವಳದ ವತಿಯಿಂದ ಚಂಡಿಕಾಯಾಗ ಜರಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ತನು-ಮನ-ಧನ-ಧಾನ್ಯಾದಿಗಳ ಅರ್ಪಣೆಯೊಂದಿಗೆ ಸಹಕರಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ. ಗೋವಿಂದ ನಾಯ್ಕ ಡಿ.ಟಿಕಾರ್ಯನಿರ್ವಹಣಾಧಿಕಾರಿ ಹೆಚ್. ಧನಂಜಯ ಶೆಟ್ಟಿಅಧ್ಯಕ್ಷರು ಹೆಚ್. ಪ್ರಭಾಕರ […]

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ವರ್ಷಗಳಿಂದ ಕುಂಟುತ್ತಾ ಸಾಗಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ (ಸೆ.21) ರೈಲ್ವೆ ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡಿದರು‌. ಆ ಮೂಲಕ ಉಡುಪಿ ನಗರದ ಎರಡು ದಶಕದ ಕನಸೊಂದು ನನಸಾದಂತಾಗಿದೆ.ಮಲ್ಪೆಯಿಂದ ಚಿತ್ರದುರ್ಗದ ಮೊಳಕಾಲ್ಮೂರು ನಡುವೆ ರಾಷ್ಟ್ರೀಯ ಹೆದ್ದಾರಿ 169 ಎ ನಿರ್ಮಾಣ ಆಗುತ್ತಿದ್ದು, ಉಡುಪಿಯ ಇಂದ್ರಾಳಿ ಬಳಿ ರೈಲ್ವೆ ಟ್ರ್ಯಾಕ್ ಹಾದು ಹೋಗುತ್ತದೆ. ಹಲವಾರು ತಾಂತ್ರಿಕ ಸಮಸ್ಯೆಗಳಿಂದ ರೈಲ್ವೆ ಬ್ರಿಡ್ಜ್ ಕಾಮಗಾರಿ […]