ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಕಾರ್ಯಗಾರ “ಶಿಕ್ಷಕರಿಗೆ 21 ಶತಮಾನದ ಕೌಶಲ್ಯಗಳು”

ಮಣಿಪಾಲ: “ಶಿಕ್ಷಕರಿಗೆ 21 ಶತಮಾನದ ಕೌಶಲ್ಯಗಳು” ಶಿಕ್ಷಕರ ಕೌಶಲ್ಯ ಅಭಿವೃದ್ಧಿ ಕಾರ್ಯಗಾರವು ರೋಟರಿ ಐಸಿರಿ ಪರ್ಕಳ ಹಾಗೂ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ ಇವರ ಸಹಪ್ರಯೋಜಕತ್ವದಲ್ಲಿ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನ ಆವರಣದಲ್ಲಿ ಸಂಪನ್ಮೂಲ ವ್ಯಕ್ತಿಯಾದ ರೋಟರಿ ಐಸಿರಿ ಪರ್ಕಳದ ರೊ. ಸ್ಮಿತಾ ಜಿ ಕಾಮತ್‍ರವರು ‘ಫೋರ್ ಸಿ’ಗಳ Critical thinking, Creativity, Communication and Collaboration (ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ಸಂವಹನ ಮತ್ತು ಸಹಯೋಗ) ಬಗ್ಗೆ ಹಾಗೂ ಡಿಜಿಟಲ್ ಸಾಕ್ಷರತೆ, ಹೊಂದಿಕೊಳ್ಳುವಿಕೆ, […]
ಉಡುಪಿ:ನೇರ ಸಾಲ ಯೋಜನೆ :ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ-ಸಹಾಯಧನ ಯೋಜನೆಯಡಿ ವೆಬ್‌ಸೈಟ್ https://www.ksbdb.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಸು ಸಾಕಾಣಿಕೆ, ಗುಡಿ ಹಾಗೂ ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ನಡೆಸಲು ಶೇ.4 ರ ವಾರ್ಷಿಕ ಬಡ್ಡಿ ದರದಲ್ಲಿ 1 ಲಕ್ಷದವರೆಗಿನ ಘಟಕ ವೆಚ್ಚ ಹೊಂದಿರುವ ವ್ಯಾಪಾರಕ್ಕೆ 20,000 ರೂ ಸಹಾಯಧನ ಮತ್ತು 80,000 ರೂ ಉಳಿಕೆ […]
ಉಡುಪಿ:ಸಾಮಾಜಿಕ ಜಾಗೃತಿಗೆ ಎನ್.ಎಸ್.ಎಸ್ ಪ್ರೇರಕ : ಜಗದೀಶ್

ಉಡುಪಿ: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ, ಜವಾಬ್ದಾರಿ ಹಾಗೂ ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಹೇಳಿದರು. ಅವರು ಶನಿವಾರ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು […]
ಉಡುಪಿ:ನಗರಸಭೆಯ ಕಛೇರಿ ಕೆಲಸ, ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯನ್ನು ಸೆಪ್ಟಂಬರ್ 23 ರಂದು ನಗರದ ಅಜ್ಜರಕಾಡು ಆರೂರು ಲಕ್ಷ್ಮೀ ನಾರಾಯಣ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಕಚೇರಿಯ ಸಾರ್ವಜನಿಕ ಕೆಲಸ ಕಾರ್ಯಗಳು ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಇರುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.