ಪಡಿತರ ಚೀಟಿ ರದ್ದತಿ ವಿವಾದ: ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಆಕ್ರೋಶ

ಉಡುಪಿ, ಸೆ.24: ಪಡಿತರ ಚೀಟಿಗಳ ರದ್ದತಿಗೆ ಸಂಬಂಧಿಸಿ ರಾಜ್ಯ ಸರ್ಕಾರವನ್ನು ದೂಷಿಸುತ್ತಿರುವ ಶಾಸಕ ಯಶಪಾಲ್ ಸುವರ್ಣ ಅವರು ಸತ್ಯವನ್ನು ಜನತೆಗೆ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಈ ಕ್ರಮವು ರಾಜ್ಯ ಸರ್ಕಾರದ ನಿರ್ಧಾರವಲ್ಲ, ಬದಲಾಗಿ ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಯ ಮೇರೆಗೆ ನಡೆಯುತ್ತಿರುವ ಪ್ರಕ್ರಿಯೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರವು ಕರ್ನಾಟಕದಲ್ಲಿ 7.76 ಲಕ್ಷಕ್ಕೂ ಹೆಚ್ಚು ಸಂಶಯಾಸ್ಪದ ಪಡಿತರ ಚೀಟಿಗಳನ್ನು ಗುರುತಿಸಿದೆ. ಅನರ್ಹ ಪಡಿತರ […]
ಜನರಿಗೆ ಸಮಾಧಾನ ಇಲ್ಲದಿದ್ದರೆ ಪಟ್ಟಣ ಪಂಚಾಯತಿ ಬೇಡ: ಸಂಸದ ಬಿ.ವೈ. ರಾಘವೇಂದ್ರ

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ವಿಚಾರದಲ್ಲಿ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ಶಾಸಕ ಗಂಟೆಹೊಳೆ ಹಾಗೂ ದೀಪಕ್ ಕುಮಾರ್ ಶೆಟ್ಟಿ ಪರಸ್ಪರ ತಳ್ಳಾಡಿಕೊಂಡ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಈ ಕುರಿತು ಸ್ಪಷ್ಟನೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಬೈಂದೂರು ಪಟ್ಟಣ ಪಂಚಾಯತನ್ನು ನಮ್ಮ ಸರ್ಕಾರ ಇದ್ದಾಗ ಒಳ್ಳೆಯ ಉದ್ದೇಶದಿಂದ ರಚನೆ ಮಾಡಿದ್ದೆವು. ಆದರೆ ಜನರಿಗೆ ಸಮಾಧಾನ ಇಲ್ಲದಿದ್ದರೆ, ಪಟ್ಟಣ ಪಂಚಾಯತಿ ಬೇಡವೆಂದು ಹೇಳಿದರೆ, ನಾನು ಅದಕ್ಕೆ ಬೆಂಬಲಿಸುತ್ತೇನೆ” ಎಂದಿದ್ದಾರೆ. “ಭವಿಷ್ಯದ ಅಭಿವೃದ್ಧಿಗೆ ಪಟ್ಟಣ ಪಂಚಾಯತ್ […]
ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ(94) ಬುಧವಾರ ಅಪರಾಹ್ನ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಂಶ ವೃಕ್ಷ, ನಾಯಿ ನೆರಳು, ಪರ್ವ, ಗೃಹಭಂಗ, ಗ್ರಹಣ, ಉತ್ತರಾಖಂಡ ಸೇರಿದಂತೆ 25 ಕಾದಂಬರಿಗಳನ್ನು ಬರೆದಿರುವ ಭೈರಪ್ಪನವರು, ಪದ್ಮಭೂಷಣ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಭೈರಪ್ಪರ ಕೃತಿಗಳುಭೀಮಕಾಯ, ಬೆಳಕು ಮೂಡಿತು, ಧರ್ಮಶ್ರೀ, ದೂರ ಸರಿದರು, ಮತದಾನ, ವಂಶವೃಕ್ಷ, ಜಲಪಾತ, ನಾಯಿ […]
ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘ: 11ನೇ ವಾರ್ಷಿಕ ಮಹಾಸಭೆ

ಉಡುಪಿ: ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ 11ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ದಿನೇಶ ಸಿ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀ ನಾರಾಯಣಗುರು ಮಂದಿರದ ಶಿವಗಿರಿ ಸಭಾಗೃಹದಲ್ಲಿ ಜರುಗಿತು. ಸಂಘವು 11 ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದ್ದು 3,708 ಸದಸ್ಯರನ್ನು ಹೊಂದಿದ್ದು ಸದಸ್ಯರಿಗೆ ವಿವಿಧ ರೀತಿಯ ಸಾಲಗಳನ್ನು ನೀಡಿ ಶೇ.97.00 ಸಾಲ ವಸೂಲಾತಿ ನಡೆಸಿದೆ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು 45 ಕೋಟಿ ವ್ಯವಹಾರ ನಡೆದಿದ್ದು ಸಂಘವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಂದಿನ ವರ್ಷಗಳಲ್ಲಿ ಐದು […]
ಕಾರ್ಕಳ: ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಕಾರ್ಕಳ–ಹೆಬ್ರಿ ರಸ್ತೆಯ ವರಂಗದ ಬಳಿ ಇಂದು ಬೆಳಿಗ್ಗೆ ಸ್ಲೀಪರ್ ಬಸ್ ಹಾಗೂ ಕೆಂಪು ಕಲ್ಲು ಹೊತ್ತ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಸುರಕ್ಷಿತರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಸಂಚಾರ ವ್ಯವಸ್ಥೆ ಸುಗಮಗೊಳಿಸಿದ್ದಾರೆ.