ಕ್ರೈಸ್ಟ್ ಕಿಂಗ್: ರಾಷ್ಟ್ರೀಯ ಹಿಂದಿ ದಿನಾಚರಣೆ

ಕಾರ್ಕಳ:ಇಲ್ಲಿನ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ ಎಸ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಎಲ್ಲಾ ಭಾಷೆಗಳಿಗೆ ತಮ್ಮದೇ ಆದ ಮಹತ್ವವಿದೆ. ಭಾಷೆಗಳಲ್ಲಿ ಪರಿಪೂರ್ಣತೆಯಿದ್ದರೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಿಂದಿ ಭಾಷೆಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು” ಎಂದು ಹೇಳಿ ಹಿಂದಿ ಭಾಷೆಯ ವ್ಯಾಕರಣ ವಿಶೇಷತೆಯ ಬಗ್ಗೆ ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯ್ಯಕ್ಷತೆ ವಹಿಸಿದ್ದ ಸಂಸ್ಥೆಯ […]
ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ನಡೆಯಲಿರುವ ಸಾಂಸ್ಕೃತಿಕ ವೈಭವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಚಾಲನೆ ನೀಡಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ನಾಟ್ಯ-ಗಾನ ಪ್ರಿಯೆಯಾದ ದುರ್ಗಾ ಆದಿಶಕ್ತಿ ದೇವಿ ಕ್ಷೇತ್ರದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಯುವ ಕಲಾವಿದರು ತಮ್ಮ ಕಲಾ ಯಶಸ್ಸಿನ ಮೆಟ್ಟಿಲನ್ನು ಏರಿರುವುದು ಉಲ್ಲೇಖನೀಯ. ಇಲ್ಲಿ ಕಲಾವಿದರಿಂದ ಸಮರ್ಪಿಸಲ್ಪಡುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಾತೆ ಸಂತುಷ್ಟಳಾಗುವುದು ಅಷ್ಟೇ ಸತ್ಯ. ನವರಾತ್ರಿ ಪರ್ವಕಾಲದಲ್ಲಿ […]
ಅಧಿಕಾರಿಗಳ ಫಾರಿನ್ ಟೂರ್ ಗೆ ರಾಜ್ಯ ಸರ್ಕಾರದಿಂದ ಬ್ರೇಕ್!

ಬೆಂಗಳೂರು: ಸರಕಾರಿ ಖರ್ಚಿನಲ್ಲಿ ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅದರ ವರದಿ ಸಲ್ಲಿಸದ ಕಾರಣಕ್ಕಾಗಿ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ರಾಜ್ಯ ಸರಕಾರ ಬ್ರೇಕ್ ಹಾಕಿದೆ. 2024ರ ಆಗಸ್ಟ್ ನಿಂದ 2025ರ ಜುಲೈವರೆಗೆ ರಾಜ್ಯ ಸರಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗೂ ಶಿಫಾರಸುಗಳೊಂದಿಗೆ ಸರಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದರು. ಆದರೆ ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದು ಸರಕಾರದ ಗಮನಕ್ಕೆ […]
ಮಹಾರಾಷ್ಟ್ರ: ವಿದ್ಯಾರ್ಥಿನಿ ಮೇಲೆ ಮತ್ತೆ ಮತ್ತೆ ಅತ್ಯಾಚಾರ ಎಸಗಿದ ಶಿಕ್ಷಕ; ಬಾಲಕಿ ಮೃತ್ಯು.

ಯವತ್ಮಾಲ್: 17 ವರ್ಷದ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಿರು ಘಟನೆ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ. ಗರ್ಭಪಾತ ಮಾಡಿಸುವ ವೇಳೆ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಂಬತ್ತು ತಿಂಗಳ ಕಾಲ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸಿದ ಮತ್ತು ಗರ್ಭಿಣಿಯನ್ನಾಗಿಸಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರ ದೂರಿನ ಪ್ರಕಾರ, ಟ್ಯೂಷನ್ ನೀಡಿದ್ದ ಆರೋಪಿ, ವಿದ್ಯಾರ್ಥಿನಿಯ ಸ್ನೇಹ ಬೆಳೆಸಿಕೊಂಡು ಕಳೆದ ಒಂಬತ್ತು ತಿಂಗಳಲ್ಲಿ ಹಲವು […]
ಹಬ್ಬದ ಸೀಸನ್ ಮತ್ತು GST ಕಡಿತ: ಮಾರುತಿ ಸುಜುಕಿ ಕಾರುಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು!

ನವದೆಹಲಿ: ಜಿಎಸ್ ಟಿ ಕಡಿತ ಹಿನ್ನಲೆ ನವರಾತ್ರಿಯ ಮೊದಲ ದಿನದಂದು ಕಾರು ಶೋ ರೂಂಗಳಲ್ಲಿ ಗ್ರಾಹಕರು ಸಂಖ್ಯೆ ಹೆಚ್ಚಾಗಿದ್ದು, ಈ ಮೂಲಕ ಆಟೋಮೊಬೈಲ್ ಉದ್ಯಮಕ್ಕೆ ಉತ್ತಮ ಆರಂಭವನ್ನು ಸಿಕ್ಕಿದಂತಾಗಿದೆ. ಕಾರುಗಳ ಬೆಲೆಗಳನ್ನು ಕಡಿಮೆ ಮಾಡಿದ ಹೊಸ GST 2.0 ಸುಧಾರಣೆಗಳ ಜಾರಿಯು ಹಬ್ಬದ ಖರೀದಿ ಭಾವನೆಗೆ ಮತ್ತಷ್ಟು ಉತ್ತೇಜನ ನೀಡಿದೆ. ಹಬ್ಬದ ಪ್ರಯುಕ್ತ ಮಾರುತಿ ಸುಜುಕಿ ಕಾರುಗಳ ಬುಕಿಂಗ್ ನಲ್ಲಿ ಭರ್ಜರಿ ಏರಿಕೆ ಕಂಡಿದೆ. “ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಅದ್ಭುತವಾಗಿದೆ – ಕಳೆದ 35 ವರ್ಷಗಳಲ್ಲಿ ನಾವು […]