ಸೈಕಾಲಜಿಯ ಪ್ರಕಾರ ಇವಿಷ್ಟು ಸಂಗತಿಗಳನ್ನು ನೀವು ಎಲ್ಲರಿಗೂ ಟಾಂ ಟಾಂ ಮಾಡದೇ ಆದಷ್ಟು ಗುಟ್ಟಾಗಿರಿಸಬೇಕಂತೆ !

ಈಗಿನ  ಹೊಸ ಟ್ರೆಂಡ್ ನಲ್ಲಿ ನಾವು ನಮ್ಮ ವೈಯಕ್ತಿಕ ವಿವರಗಳನ್ನು ಖಾಸಗಿಯಾಗಿಡೋದೇ ಕಡಿಮೆಯಾಗಿದೆ. ಎಲ್ಲವನ್ನೂ ಸ್ನೇಹಿತರ ಮುಂದೆ, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ಬಿಡುತ್ತೇವೆ. ಎಷ್ಟೋ ಖಾಸಗಿ ಮಾತುಗಳು ಎಲ್ಲೆಲ್ಲೂ ಸೋರಿಕೆಯಾಗುತ್ತವೆ. ಆದರೆ ನಮಗೆ ಸಂಬಂಧಪಟ್ಟ ಒಂದಷ್ಟು ಮಾಹಿತಿಗಳನ್ನು ಖಾಸಗಿಯಾಗಿಡುವುದರಿಂದ ಎಷ್ಟೋ ಚಿಂತೆಗಳನ್ನು ತಪ್ಪಿಸಬಹುದು ಮತ್ತು ನೆಮ್ಮದಿಯುತ ಜೀವನ ನಡೆಸಬಹುದು ಎನ್ನುತ್ತೆ ಸೈಕಾಲಜಿ. ಇದರಿಂದ ಮಾನಸಿಕ ನೆಮ್ಮದಿ ಕೂಡ ಹೆಚ್ಚುತ್ತದೆ. ಸೈಕಾಲಜಿ ಪ್ರಕಾರ ನಾವು ಕೆಲವೊಂದು ವಿಷಯಗಳನ್ನು ಖಾಸಗಿಯಾಗಿಡಬೇಕಂತೆ ಯಾವುದು ಆ ಸಂಗತಿಗಳು ತಿಳಿದುಕೊಳ್ಳೋಣ ಬನ್ನಿ. ಅತಿಯಾಗಿ ಹಂಚಿಕೊಳ್ಳುವುದರಿಂದ […]

ಸರ್ಕಾರಿ ನೌಕರರ ಕುಟುಂಬಗಳಿಗೆ ಆರೋಗ್ಯ ಸಂಜೀವಿನಿ: ರಾಜ್ಯ ಸರಕಾರ ಘೋಷಣೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು. ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.

ಉಡುಪಿ:ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31 ರ […]

ಉಡುಪಿ:ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯ ಬಗ್ಗೆ ವರದಿ ನೀಡಿ : ಸಂಸದ ಬಿ.ವೈ ರಾಘವೇಂದ್ರ

ಉಡುಪಿ: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿಜಿಲ್ಲೆಯ 19 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ ಬಗ್ಗೆ ವರದಿ ನೀಡಬೇಕೆಂದು ಅಭಿಯಂತರರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) […]

ಉಡುಪಿ:ಮಕ್ಕಳ ಸಹಾಯವಾಣಿ ಸಂಖ್ಯೆ 1098 ಪ್ರದರ್ಶಿಸಲು ಸೂಚನೆ

ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು […]