ಸೆಪ್ಟೆಂಬರ್ 28 ರಿಂದ ಕನ್ನಡದಲ್ಲಿ ‘ಬಿಗ್ ಬಾಸ್’ ಅಬ್ಬರ: ಈ ಬಾರಿ ಕಿಚ್ಚ ಸುದೀಪ್‌ ನಿರೂಪಣೆ!

‘ಬಿಗ್‌ಬಾಸ್‌’ ಕನ್ನಡ ಸೀಸನ್‌ 12 ಸೆಪ್ಟೆಂಬರ್‌ 28ರಿಂದ ಶುರುವಾಗಲಿದೆ ಎಂದು ಕಲರ್ಸ್‌ ಕನ್ನಡ ಈಗಾಗಲೇ ದೃಢಪಡಿಸಿದೆ. ಕಿಚ್ಚ ಸುದೀಪ್‌ ಅವರೇ ಈ ಬಾರಿಯೂ ನಿರೂಪಣೆ ಮಾಡಲಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಯಾವೆಲ್ಲಾ ಕಂಟೆಸ್ಟೆಂಟ್‌ ಈ ಬಾರಿ ಬಿಗ್‌ ಬಾಸ್‌ ಮನೆಗೆ ಹೋಗಬಹುದು ಎಂಬ ಪ್ರಶ್ನೆ ಮಾತ್ರ ಕುತೂಹಲದ ಪ್ರಶ್ನೆಯಾಗಿ ಉಳಿದಿದೆ. ಇದರ ನಡುವೆ ಈ ಬಾರಿ ಬಿಗ್‌ ಬಾಸ್‌ಗೆ ಜನಸಾಮಾನ್ಯರಿಗೂ ಎಂಟ್ರಿಯಿದೆ ಎಂದು ಕಲರ್ಸ್‌ ಕನ್ನಡ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೀಗ ಕಲರ್ಸ್​ ಕನ್ನಡ ಬುಧವಾರ […]

ಹಾಕಿ ಇಂಡಿಯಾ ಲೀಗ್ ಸೀಸನ್ 2: SG ಪೈಪರ್ಸ್‌ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

SG ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ SG ಪೈಪರ್ಸ್ ಯುವ ಹಾಗೂ ಅನುಭವೀ ಆಟಗಾರರ ಜೊತೆಗೆ ತಂಡವನ್ನು ಬಲಿಷ್ಠಗೊಳಿಸುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಬಗ್ಗೆ ಮಾತನಾಡಿದ ತಂಡದ ನಾಯಕಿ ನವನೀತ್ ಕೌರ್ ‘ಕ್ರೀಡಾಪಟುಗಳಾಗಿ SG ಪೈಪರ್ಸ್ ನಮಗೆ ಈ ಅವಕಾಶ ನೀಡಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮೈದಾನದಲ್ಲಿರುವ ಆಟಗಾರರಿಂದ ಇನ್‌ಪುಟ್‌ಗಳನ್ನು ಪಡೆಯುವುದು ಮತ್ತು ನಮ್ಮ ತರಬೇತುದಾರ ಸಹಾಯ ಮಾಡಿದರು. ಉದಿತಾ […]

ಉಡುಪಿ: ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಡಿಲಿಗೆ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ’

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಉಡುಪಿ ಜಿಲ್ಲೆ , ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಖ್ಯಾತ ಮನೋವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ.ಪಿ.ವಿ.ಭಂಡಾರಿ ಅವರಿಗೆ ಬುಧವಾರದಂದು ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್‌.ಚಂದ್ರಶೇಖರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಿದ್ದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಪಿ.ವಿ.ಭಂಡಾರಿ, ಓದು ನನಗೆ […]

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಎಂ.ವಸಂತ್ ಕಿಣಿ ಆಯ್ಕೆ.

ಉಡುಪಿ: ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 33ನೇ ವಾರ್ಷಿಕ ಮಹಾಸಭೆಯು ಸೆ.20 ರಂದು ಅಧ್ಯಕ್ಷರಾದ ಹರೀಶ್ ಕುಂದರ್ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ಸಭಾಂಗಣದಲ್ಲಿ ಜರುಗಿತು. ಸಂಘದ ಮಾಜಿ ಅಧ್ಯಕ್ಷರಾದ ಕೆ. ಪ್ರಶಾಂತ್ ಬಾಳಿಗಾ ಮತ್ತು ಎಲ್ಲ ಪೂರ್ವ ಅಧ್ಯಕ್ಷರು ಸೇರಿ ಎಂ.ವಿಶ್ವೇಶ್ವರಯ್ಯ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆಗೈದು ಗೌರವ ಸೂಚಿಸಿದರು.ಎಂ. ವಸಂತ್ ಕಿಣಿ, ಆನಂದ್ ಪಾಲಿಮರ್ಸ್ ಹಿರಿಯಡ್ಕ ಇವರು 2025-26 ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ, ಎಂ. ವಲ್ಲಭ್ […]

ಮಣಿಪಾಲ: ಸೆ.26ರಂದು MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ ನವರಾತ್ರಿ ಹಬ್ಬದ ವಿಶೇಷವಾಗಿ ‘ದುರ್ಗಾ ಮಾ ಮೇಕ್ ಓವರ್’ ಉಚಿತ ಕಾರ್ಯಗಾರ: ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(MSDC), ಓರೇನ್ ಇಂಟರ್ನ್ಯಾಷನಲ್’ನಲ್ಲಿ ನವರಾತ್ರಿ ಹಬ್ಬದ ವಿಶೇಷವಾಗಿ ‘ದುರ್ಗಾ ಮಾ ಮೇಕ್ ಓವರ್’ ಉಚಿತ ಕಾರ್ಯಗಾರ ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರಿಗೆ ನಡೆಯಲಿದೆ. ಎಲ್ಲರಿಗೂ ಮುಕ್ತವಾಗಿ ಭಾಗವಹಿಸಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಎಂಎಸ್ ಡಿಸಿ ಕಟ್ಟಡ, ಮೂರನೇ ಮಹಡಿ, ಓರೇನ್ ಇಂಟರ್ನ್ಯಾಷನಲ್, ಮಣಿಪಾಲಮೊ: 8123165068