ಮನೆಯಲ್ಲೇ ಸುಲಭದಲ್ಲಿ ಅಣಬೆ ಬೆಳೆಸಿ ಒಳ್ಳೆಯ ಹಣ ಗಳಿಸಿ : ಅಣಬೆ ಕೃಷಿಯ ಬಗ್ಗೆ ಸಿಂಪಲ್ಲಾಗ್ ಹೇಳ್ತಿವಿ ಕೇಳಿ!

ಕೃಷಿ ಮಾಡಬೇಕು ಅಂದರೆ ಎಕರೆಗಟ್ಟಲೆ ಜಮೀನು, ಲಕ್ಷಗಟ್ಟಲೆ ಹೂಡಿಕೆ ಬೇಕು ಎನ್ನುವುದು ಸಾಮಾನ್ಯವಾಗಿ ಕೇಳಿಬರುವ ಮಾತು. ಆದರೆ ಇದು ಸಂಪೂರ್ಣ ತಪ್ಪು ಕಲ್ಪನೆ. ಇಂದಿನ ದಿನಗಳಲ್ಲಿ ಅಣಬೆ (ಮಶ್ರೂಮ್) ಬೆಳೆ ಅತ್ಯಂತ ಬೇಡಿಕೆಯಲ್ಲಿದ್ದು, ಹೋಟೆಲ್ಗಳಿಂದ ಹಿಡಿದು ಮನೆಗಳವರೆಗೆ ಎಲ್ಲೆಡೆ ಗ್ರಾಹಕರಿದ್ದಾರೆ. ವಿಶೇಷವೆಂದರೆ, ಈ ಬೆಳೆಗೆ ಹೆಚ್ಚಿನ ಜಾಗವೂ ಅಗತ್ಯವಿಲ್ಲ, ದೊಡ್ಡ ಹೂಡಿಕೆಯೂ ಬೇಕಾಗಿಲ್ಲ. ಮನೆಯ ಒಂದು ಮೂಲೆಯಲ್ಲೇ ಬೆಳೆಸಬಹುದಾದ ಈ ಅಣಬೆಗಳು ಕೈತುಂಬಾ ಆದಾಯ ತರುವ ಸಾಮರ್ಥ್ಯ ಹೊಂದಿವೆ.ಬನ್ನಿ ಹಾಗಾದ್ರೆ ಅಣಬೆ ಕೃಷಿ ಹೇಗೆ ಮಾಡ್ಬೋದು ಅನ್ನೋದ್ರ […]

ರಸ್ತೆ ಗುಂಡಿ ಮುಚ್ಚಲು ₹750ಕೋಟಿ ಅನುದಾನ ಬಿಡುಗಡೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ‘ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯಮಂತ್ರಿ ₹ 750 ಕೋಟಿ ಅನುದಾನ ನೀಡಿದ್ದಾರೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಅವರು (ಬಿಜೆಪಿಯವರು) ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ. ಒಂದೇ ಒಂದು ಮೇಲ್ಸೇತುವೆ ಮಾಡಿಲ್ಲ. ಹೀಗಾಗಿಯೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ’ ಎಂದರು. ‘ಬಿಜೆಪಿಯವರು ಕೇಂದ್ರದಿಂದ ಬೆಂಗಳೂರಿಗೆ ಒಂದು ರೂಪಾಯಿ ಅನುದಾನ […]

ಜಾತಿಗಣತಿಗೆ ನೋ ಬ್ರೇಕ್; ಜಾತಿಗಣತಿಗೆ ಹೈಕೋರ್ಟ್ ನಿಂದ ತಡೆಯಿಲ್ಲ.

ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸ್ಥಿತಿ ಸಮೀಕ್ಷೆ (ಜಾತಿ ಗಣತಿ) ಸೆ.22ರಿಂದ ಆರಂಭವಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ‘ಜಾತಿ ಗಣತಿ’ ಸಮೀಕ್ಷೆಗೆ ಹೈಕೋರ್ಟ್​ ಮಧ್ಯಂತರ ಆದೇಶ ಹೊರಡಿಸಿದ್ದು, ತಡೆ ನೀಡಲು ನಿರಾಕರಿಸಿದೆ. ಜಾತಿ ಗಣತಿಗೆ ತಡೆ ನೀಡುವಂತೆ ಬ್ರಾಹ್ಮಣ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಮುಖಂಡರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್​ನಿಂದ ಸೆ.25 ರಂದು ಮಧ್ಯಂತರ ಆದೇಶ ಹೊರಬಿದ್ದಿದೆ. ಅರ್ಜಿ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಹೈಕೋರ್ಟ್ ನಾಲ್ಕು ವಾರಗಳ […]

ಕೋಟ: ನೀರಿನ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಮೃತ್ಯು.

ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ‌ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ನಡೆದಿದೆ. ಮೃತಪಟ್ಟವರನ್ನು ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಎಂದು ಗುರುತಿಸಿದೆ. ಈತ ಸಹೋದರಿ, ತಾಯಿಯನ್ನು ಅಗಲಿದ್ದಾನೆ. ಇವನು ಬುಧವಾರ ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ […]

ರಷ್ಯಾದ AK 203 ರೈಫಲ್ ಶೀಘ್ರದಲ್ಲಿ ಉ.ಪ್ರದೇಶದಲ್ಲಿ ಉತ್ಪಾದಿಸುವ ಯೋಜನೆ: ಪ್ರಧಾನಿ ಮೋದಿ.

ಗ್ರೇಟರ್ ನೋಯ್ಡಾ: ಭಾರತೀಯ ಸಶಸ್ತ್ರ ಪಡೆಗಳು ಸ್ವಾವಲಂಬನೆ ಸಾಧಿಸಲು ಮತ್ತು ಬಾಹ್ಯ ಅವಲಂಬನೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಂದು ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಮೇಳ 2025 ಅನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ರಕ್ಷಣಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಸ್ಥಳೀಯ ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಉತ್ತರ ಪ್ರದೇಶವು ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ರಷ್ಯಾದ ಸಹಯೋಗದೊಂದಿಗೆ ಸ್ಥಾಪಿಸಲಾದ ಕಾರ್ಖಾನೆಯಲ್ಲಿ ಶೀಘ್ರದಲ್ಲೇ AK-203 […]