ಆಳ್ವಾಸ್ ಕಾಲೇಜಿನಲ್ಲಿ ‘ಮಾಯಾಚಕ್ರ’ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್‌ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು […]

ಟಿಎಆರ್ ( Tax Audit Report) ಸಲ್ಲಿಕೆಗೆ ಅ.31 ಡೆಡ್ ಲೈನ್.

ನವದೆಹಲಿ: ಟ್ಯಾಕ್ಸ್ ಆಡಿಟ್ ರಿಪೋರ್ಟ್​ಗಳನ್ನು ಸಲ್ಲಿಸಲು ಸೆಪ್ಟೆಂಬರ್ 30ಕ್ಕೆ ಇದ್ದ ಗಡುವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಆದಾಯ ತೆರಿಗೆಗಳ ಕಾನೂನು ನಿಯಂತ್ರಕವಾದ ಸಿಬಿಡಿಟಿ ಎರಡು ಹೈಕೋರ್ಟ್​ಗಳ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಂಡಿದೆ. ರಾಜಸ್ಥಾನ್ ಹೈಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್ ಟ್ಯಾಕ್ಸ್ ಆಡಿಟ್ ರಿಪೋರ್ಟ್​ಗಳನ್ನು ಸಲ್ಲಿಸಲು ಡೆಡ್​ಲೈನ್ ಅನ್ನು ಅ. 31ರವರೆಗೆ ವಿಸ್ತರಿಸುವಂತೆ ಸಿಬಿಡಿಟಿಗೆ ನಿರ್ದೇಶನ ನೀಡಿದ್ದವು. ತೆರಿಗೆ ಪಾವತಿದಾರರು ಹಾಗೂ ಪ್ರಾಕ್ಟೀಶನರ್​ಗಳಿಗೆ ಆಡಿಟ್ ರಿಪೋರ್ಟ್ ಅನ್ನು ಸರಿಯಾದ ಸಮಯಕ್ಕೆ ಮುಗಿಸಲು ಕೆಲ ಸಮಸ್ಯೆಗಳಿವೆ ಎಂದು ಹೇಳಿ […]

ಡಿಜಿಟೆಲ್ ಪಾವತಿಗೆ RBI ನಿಂದ ಬಂತು ಹೊಸ ರೂಲ್ಸ್!

ಡಿಜಿಟಲ್​ ಪಾವತಿ ವ್ಯವಸ್ಥೆಯಲ್ಲಿ ಒಟಿಪಿಯಲ್ಲದೇ ಎರಡು ಹಂತದ ದೃಢೀಕರಣದ ಮಾನದಂಡವನ್ನು ಅನುಸರಿಸುವಂತೆ 2026ರ ಏಪ್ರಿಲ್​ 1ರಂದು ಜಾರಿಗೊಳಿಸುವುದಾಗಿ ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾ(ಆರ್​ಬಿಐ) ಗುರುವಾರ(ಸೆ.24) ಘೋಷಿಸಿದೆ. ಇದೀಗ ಪ್ರಸ್ತುತ, ಸದ್ಯದ ಎಲ್ಲಾ ಡಿಜಿಟಲ್ ಪಾವತಿಗಳು ಹೆಚ್ಚುವರಿ ಅಂಶವಾಗಿ SMS ಆಧಾರಿತ ಒಂದು-ಬಾರಿ ಪಾಸ್‌ವರ್ಡ್‌ಗಳನ್ನು (OTP ಗಳು) ಮಾತ್ರ ಅವಲಂಬಿಸಿವೆ. 2026ರ ಏಪ್ರಿಲ್​ 1ರಿಂದ ಒಟಿಪಿ ಜತೆ ಎರಡು ಹಂತದ ದೃಢೀಕರಣವನ್ನು ಕಡ್ಡಾಯಗೊಳಿಸಲಿದೆ. ಆರ್‌ಬಿಐ ನಿರ್ದಿಷ್ಟ ವಿಧಾನಗಳನ್ನು ಕಡ್ಡಾಯಗೊಳಿಸದಿದ್ದರೂ, ಸಾಮಾನ್ಯವಾಗಿ ಬಳಕೆದಾರರಿಗೆ ತಿಳಿದಿರುವ ಪಾಸ್‌ವರ್ಡ್, ಪಿನ್‌, ಕಾರ್ಡ್, ಫಿಂಗರ್‌ಪ್ರಿಂಟ್ […]

ಜಿಎಸ್ ಟಿ ಇಳಿಕೆ ಬಿಜೆಪಿಯ ದೊಡ್ಡ ನಾಟಕ, 8 ವರ್ಷ ಜನರ ಹಣ ಕೊಳ್ಳೆ ಹೊಡೆದ್ರು: ಮಂಜುನಾಥ ಭಂಡಾರಿ ವಾಗ್ದಾಳಿ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಂಟು ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಅವೈಜ್ಞಾನಿಕ ಜಿಎಸ್‌ಟಿಯನ್ನು ಇದೀಗ ಇಳಿಕೆ ಮಾಡಿರುವ ಬಗ್ಗೆ ಅಭಿಯಾನ ನಡೆಸುತ್ತಿರುವುದು ಬಿಜೆಪಿಯ ಬಿಹಾರ ಚುನಾವಣೆಗಾಗಿನ ಗಿಮಿಕ್ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 8 ವರ್ಷಗಳ ಅವಧಿಯಲ್ಲಿ ಭಾರೀ ಪ್ರಮಾಣದ ಜಿಎಸ್‌ಟಿ ಮೂಲಕ ದೇಶದ ಶೇ. 70ರಷ್ಟು […]

ಉಡುಪಿ: ಸಾಲ-ಸಹಾಯಧನ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ […]