ಪಡುಬಿದ್ರಿ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಪಿಕಪ್ ಗೆ ಟಿಪ್ಪರ್ ಡಿಕ್ಕಿ; ಭೀಕರ ಅಪಘಾತಕ್ಕೆ ನವ ವಿವಾಹಿತ ಬಲಿ

ಉಡುಪಿ: ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದಾಗಿ ನಡೆದ ಅಪಘಾತದಲ್ಲಿ ನವ ವಿವಾಹಿತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ. ಮೃತನನ್ನು ಬಿಹಾರ ಮೂಲದ ಎರ್ಮಾಳಿನ ಪ್ರೈವುಡ್ ಫ್ಯಾಕ್ಟರಿ ಉದ್ಯೋಗಿ ರಾಜಕುಮಾರ ಶರ್ಮ(23) ಎಂದು ಗುರುತಿಸಲಾಗಿದೆ. ಇವರು ಇಬ್ಬರು ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿ ಪೇಟೆ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ […]