ನಟ ವಿಜಯ್ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 31ಕ್ಕೂ ಹೆಚ್ಚು ಮಂದಿ ಮೃತ್ಯು; 40 ಮಂದಿಯ ಸ್ಥಿತಿ ಚಿಂತಾಜನಕ

ಚೆನೈ: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು […]
ಬಾಂಗ್ಲಾಕ್ಕೆ ಗಡಿಪಾರಾದವರನ್ನು ಮರಳಿ ಕರೆತರಲು ಕಲ್ಕತ್ತ ಕೋರ್ಟ್ ಆದೇಶ!

ಕೋಲ್ಕತ್ತ: ಇಬ್ಬರು ಮಹಿಳೆಯರು ಮತ್ತು ಅವರ ಕುಟುಂಬಸ್ಥರನ್ನು ‘ಅಕ್ರಮ ವಲಸಿಗರು’ ಎಂದು ತೀರ್ಮಾನಿಸಿ ಪಶ್ಚಿಮ ಬಂಗಾಳದಿಂದ ಬಾಂಗ್ಲಾದೇಶದ ಬೀರ್‌ಭೂಮ್ ಜಿಲ್ಲೆಗೆ ಗಡಿಪಾರು ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಲ್ಕತ್ತ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ.ಸೋನಾಲ್ ಬೀಬಿ, ಸ್ವೀಟಿ ಬೀಬಿ ಮತ್ತು ಕುಟುಂಬದ ಇತರ ನಾಲ್ವರು ಸದಸ್ಯರನ್ನು ಒಂದು ತಿಂಗಳ ಒಳಗಾಗಿ ಭಾರತಕ್ಕೆ ಮರಳಿ ಕರೆತರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ. ಶುಕ್ರವಾರ ನೀಡಿರುವ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು ಎಂಬ ಕೇಂದ್ರ ಸರ್ಕಾರದ ಮನವಿಯನ್ನೂ […]
ಉಡುಪಿ: ತನ್ನ ಸಹಚರರಿಂದಲೇ ಭೀಕರವಾಗಿ ಕೊಲೆಯಾದ ಎಕೆಎಂಎಸ್ ಮಾಲೀಕ ಸೈಫುದ್ದೀನ್

ಉಡುಪಿ: ಯಾವುದೋ ವ್ಯವಹಾರದ ಕಾರಣಕ್ಕಾಗಿ ಸಹಚರರೇ ಸೇರಿಕೊಂಡು ಎಕೆಎಂಎಸ್ ಬಸ್ ಮಾಲೀಕ ಸೈಪುದ್ದೀನ್ ನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಣಿಪಾಲದಿಂದ ಕೊಡವೂರಿಗೆ ಒಂದೇ ಕಾರಿನಲ್ಲಿ ತೆರಳಿದ್ದ ಮೂವರು ಸಹಚರರು, ಸೈಫುದ್ದೀನ್ ತನ್ನ ಕೊಡವೂರಿನ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಹಿಂದಿನಿಂದ ಚೂರಿ ಹಾಗೂ ತಲವಾರಿನಿಂದ ಇರಿದು ಕೊಲೆಗೈದಿದ್ದಾರೆ. ಡಯಾನ ಕುಕ್ಕಿಕಟ್ಟೆಯ ಫೈಜಲ್ ಖಾನ್, ಕಂಬಳ್ಳಿಯ ಜನತಾ ಕಾಲೋನಿಯ ಮೊಹಮ್ಮದ್ ಶರೀಫ್ ಮತ್ತು ಸುರತ್ಕಲ್ ಚೊಕ್ಕಬೆಟ್ಟಿನ ಶುಕ್ರು ಯಾನೆ ಅದ್ದು ಎಂಬಾವರೇ ಹತ್ಯೆಗೈದ ಆರೋಪಿಗಳೆಂದು ತಿಳಿದುಬಂದಿದೆ. ಈ ಮೂವರು ಸೈಫುದ್ದೀನ್ […]
ಉಡುಪಿ: ತನ್ನ ಸಹಚರರಿಂದಲೇ ಬರ್ಬರವಾಗಿ ಹತ್ಯೆಯಾದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ?

ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ಮೂರು ಮಂದಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಯಾವುದೋ ವ್ಯವಹಾರ ಸಂಬಂಧಿಸಿದಂತೆ ಮಾತುಕತೆಗೆ ನಡೆಸಲು ಸೈಫುದ್ದೀನ್ ತನ್ನ ಕೊಡವೂರಿನ ಮನೆಗೆ ಬಂದಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪರಿಚಯಸ್ಥರೇ ಆದ ಕಂಬಳ್ಳಿಯ ಜನತಾ ಕಾಲೋನಿಯ ಮೊಹಮ್ಮದ್ […]
ಮಂಗಳೂರು: ‘ಕಾಸ್ಕ್’ ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ

ಮಂಗಳೂರು: ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಪ್ಟೆಂಬರ್ 21ರಂದು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು. ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. […]