ಗಂಗಾರತಿಗೈದ ಪೇಜಾವರ ಶ್ರೀಗಳು

ಉಡುಪಿ: ಉಡುಪಿಯ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉತ್ತರ ಭಾರತ ಪ್ರವಾಸದಲ್ಲಿದ್ದಾರೆ. ವರ್ಷಾವಧಿ ತೀರ್ಥಕ್ಷೇತ್ರ ಪ್ರವಾಸದಲ್ಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ರಾತ್ರಿ ಕಾಶಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಗಂಗಾ ತೀರದಲ್ಲಿ ನಡೆದ ಗಂಗಾರತಿಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಸ್ವತಃ ಗಂಗಾರತಿಗೈದಿದ್ದಾರೆ. ಸ್ಥಳೀಯಾಡಳಿತವು ಪೇಜಾವರ ಶ್ರೀಗಳ ಗಂಗಾರತಿಗೆ ವ್ಯವಸ್ಥೆ ಕಲ್ಪಿಸಿತ್ತು. ಪೇಜಾವರ ಶ್ರೀಗಳು ಉತ್ತರ ಭಾರತದ ವಿವಿಧ ಕ್ಷೇತ್ರಗಳಿಗೆ ಈ ವೇಳೆ ಭೇಟಿ ನೀಡಲಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆಹಚ್ಚುವ ಕಾರ್ಯಕ್ಕೆ ವೇಗ ನೀಡಿ: ಸಚಿವ ಕೆ.ಎಚ್. ಮುನಿಯಪ್ಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ರಾಜ್ಯದ ಆರ್ಥಿಕ ಸ್ಥಿತಿಯು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಕೇಂದ್ರ […]