ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ.

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಉಡುಪಿ ತಾಲೂಕು, ಪೆರ್ಡೂರು ವಲಯ ಕುಕ್ಕೆಹಳ್ಳಿ ಕಾರ್ಯಕ್ಷೇತ್ರದಲ್ಲಿ ಸೆ.21 ರಂದು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ, ರೋಟರಿ ಕ್ಲಬ್ ಮಣಿಪಾಲ, ಗ್ರಾಮ ಪಂಚಾಯತ್ ಕುಕ್ಕೆಹಳ್ಳಿ, ಹಾಲು ಉತ್ಪಾದಕರ ಸಹಕಾರಿ ಸಂಘ ಕುಕ್ಕೆಹಳ್ಳಿ ಇವರ ಸಹಯೋಗದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪದ್ಮ ವಿಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ […]

ಉಡುಪಿ: ಎಕೆಎಂಎಸ್ ಸೈಫ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ.

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫ್ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಬಂಧಿತ ಆರೋಪಿಗಳು. ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ […]

ಟೆನ್ನಿಸ್ ಬಾಲ್ ಕ್ರಿಕೆಟ್ ದಿಗ್ಗಜ ಅಲ್ ರೌಂಡರ್ ವಿನ್ಸಿ ಪಡುಬಿದ್ರೆ ಇನ್ನಿಲ್ಲ.

ಉಡುಪಿ: ಕರಾವಳಿಯ ಖ್ಯಾತ ಕ್ರಿಕೆಟಿಗ, ಪ್ರತಿಷ್ಠಿತ ರಾಜ್ಯಮಟ್ಟದ ಮತ್ತು ರಾಷ್ಟ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಕೂಟಗಳಲ್ಲಿ ತನ್ನ ಆಲ್ ರೌಂಡರ್ ಆಟದ ಮೂಲಕ ಕ್ರಿಕೆಟ್ ಪ್ರೇಮಿಗಳ ಮನಸ್ಸು ಗೆದ್ದ ವಿನ್ಸಿ ಪಡುಬಿದ್ರೆ ನಾಮಾಂಕಿತ ವಿನ್ಸೆಂಟ್ ಫೆರ್ನಾಂಡಿಸ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವಿಭಾಜ್ಯತ ಜಿಲ್ಲೆಯ ಮತ್ತು ರಾಜ್ಯದ ಪ್ರತಿಷ್ಠಿತ ಪಡುಬಿದ್ರೆ ಫ್ರೆಂಡ್ಸ್ ಇದರ ಪ್ರಮುಖ ಆಟಗಾರರಾಗಿದ್ದ ವಿನ್ಸಿ ತನ್ನ 45ರ ಹರೆಯದಲ್ಲೂ ಬ್ಯಾಟಿನಲ್ಲಿ ಮಿಂಚು ಹರಿಸುತ್ತಿದ್ದರು. ಮೈದಾನದಲ್ಲಿ ಅತ್ಯಂತ ಶ್ರೇಷ್ಠ ಆಟಗಾರರಾಗಿದ್ದ ಇವರು ಕಳೆದ ಹಲವಾರು ವರ್ಷಗಳಿಂದ ಪಡುಬಿದ್ರೆಯಲ್ಲಿ […]

ಮಹಿಳಾ ಕಾರ್ಯಕರ್ತೆಯರಿಗೆ ವೇದಿಕೆಯಲ್ಲಿ ಸಿಕ್ತು ಮಣೆ, ಶಿವಮೊಗ್ಗದಲ್ಲೊಂದು ಅಪರೂಪದ ಕಾರ್ಯಕ್ರಮ: ಶಾಸಕ ಮಂಜುನಾಥ ಭಂಡಾರಿ ನಿರ್ಧಾರಕ್ಕೆ ಭಾರೀ ಮೆಚ್ಚುಗೆ

ಶಿವಮೊಗ್ಗ: ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳ ವೇದಿಕೆಯನ್ನು ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಮುಖಂಡರು ಆವರಿಸಿಕೊಂಡಿರುತ್ತಾರೆ. ಅದರಲ್ಲೂ ಪುರುಷರದ್ದೇ ಪಾರುಪತ್ಯ ಇರುತ್ತದೆ. ಮಹಿಳಾ ನಾಯಕಿಯರು ಮತ್ತು ಕಾರ್ಯಕರ್ತೆಯರನ್ನು ರಾಜಕೀಯ ಪಕ್ಷಗಳ ವೇದಿಕೆಗಳಲ್ಲಿ ಕಡೆಗಣಿಸಲಾಗುತ್ತದೆ ಎಂಬ ಆರೋಪಗಳು ಸುಳ್ಳಲ್ಲ. ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆಯನ್ನು ಸಂಪೂರ್ಣವಾಗಿ ಮಹಿಳೆಯರಿಗೆ ಮೀಸಲಿರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ, ಶಾಸಕರು ಮತ್ತು ಮುಖಂಡರು ವೇದಿಕೆಯ ಕೆಳಗೆ ಸಭಿಕರ ಸಾಲಿನಲ್ಲಿ‌ ಆಸೀನರಾಗಿದ್ದರು. ಅಪರೂಪದಲ್ಲೇ ಅಪರೂಪದ ಈ ಕ್ಷಣಗಳಿಗೆ ಸಾಕ್ಣಿಯಾಗಿದ್ದು ಇಂದು […]