ಆತ್ರಾಡಿ ಮಸೀದಿಯಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಎಕೆಎಂಎಸ್ ಬಸ್ ಮಾಲೀಕ ಸೈಫ್ ಅಂತ್ಯಸಂಸ್ಕಾರ

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿರುವ ತನ್ನದೇ ಮನೆಯಲ್ಲಿ ಕೊಲೆಯಾದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ನ ಪೋಸ್ಟ್ಮಾರ್ಟಂ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಸೈಫ್ ಅವರ ದೇಹವನ್ನು ವಿಶೇಷವಾಗಿ ಸಜ್ಜುಗೊಳಿಸಿದ ಟೆಂಪೋದಲ್ಲಿ ಆತ್ರಾಡಿ ಮಸೀದಿಗೆ ಕರೆತರಲಾಯಿತು.ಅವರೇ ಮಾಲೀಕರಾಗಿದ್ದ ಬಸ್ಸುಗಳು ಸಹ ಮೆರವಣಿಗೆಯುದ್ದಕ್ಕೂ ಸಾಗಿಬಂದವು. ಸಾವಿರಾರು ಮಂದಿ ಜನರ ಸಾಗರದ ನಡುವೆ ಅಂತಿಮ ಗೌರವ ಸಲ್ಲಿಸಿದರು. ಅತ್ರಾಡಿ ಮಸೀದಿಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದ್ದು, ನಂತರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಲಿದೆ.
ಬೀಚ್ ಕ್ರೀಡಾಕೂಟಗಳಿಂದ ಬೀಚ್ ಪ್ರವಾಸೋದ್ಯಮಕ್ಕೆ ಉತ್ತೇಜನ : ಸ್ವರೂಪ ಟಿ.ಕೆ

ದೇವಾಲಯಗಳ ನಗರಿ ಎಂದೇ ಪ್ರಸಿದ್ದಿ ಪಡೆದ ಉಡುಪಿ ಜಿಲ್ಲೆಯು ದೇಗುಲ ಪ್ರವಾಸೋದ್ಯಮದಲ್ಲಿ ಅದಾಗಲೇ ಮುಂಚೂಣಿಯಲ್ಲಿದೆ. ಇಲ್ಲಿನ ದೇವಸ್ಥಾನಗಳಲ್ಲಿ ಜರುಗುವ ಹಬ್ಬ ಹರಿದಿನಗಳು ರಾಜ್ಯದಲ್ಲೇ ಹೆಸರುವಾಸಿಯಾಗಿದ್ದು ಲಕ್ಷಾಂತರ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಇದರ ಜೊತೆಗೆ ಜಿಲ್ಲೆಗೆ ದೈವದತ್ತವಾಗಿ ದೊರೆತಿರುವ ಬೀಚ್ ಗಳನ್ನು ವಿಶ್ವ ಮಟ್ಟದಲ್ಲಿ ಪ್ರದರ್ಶಿಸುವ ನಿಟ್ಟಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಮನೋರಂಜನಾ ಕಾರ್ಯಕ್ರಮಗಳನ್ನು ಹಾಗೂ ಕ್ರೀಡಾಕೂಟಗಳನ್ನು ಹಮ್ಮಿಕೊಂಡು ವಿಶ್ವಾದ್ಯಂತದ ಪ್ರವಾಸಿಗರನ್ನು ಆಕರ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಮಲ್ಪೆ ಬೀಚ್ ನಲ್ಲಿ ಜಿಲ್ಲಾಡಳಿತ, […]
ಉಡುಪಿ: ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್. ವಿಶೇಷ ಶಿಬಿರ ಪೂರಕ

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈ ಸ್ಕೂಲ್) ಉಡುಪಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಎನ್‌ಎಸ್ಎಸ್ ಘಟಕ ಉಡುಪಿಯ ಕೊಡವೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ದಿನಗಳ ಕಾಲ “ನಶಾಮುಕ್ತ ಭಾರತ” ಅಭಿಯಾನದಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಭಾಗದ ಜನರೊಂದಿಗೆ ಬೆರೆತು ಶ್ರಮದಾನದ ಸಂತಸವನ್ನು ಅನುಭವಿಸಿ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದು, ಪ್ರತಿಭಾ ಪ್ರದರ್ಶನ, ವ್ಯಕ್ತಿತ್ವ ವಿಕಸನ, ಪರಿಸರ ಮಾಲಿನ್ಯಕಾರಕ ಪ್ಲಾಸ್ಟಿಕ್ ಸಂಗ್ರಹಣೆ ಇತ್ಯಾದಿ ಅನೇಕ ಉದ್ದೇಶಗಳನ್ನು ಈ […]
ರಾಜ್ಯ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು : ರಾಜ್ಯ ಹೈಕೋರ್ಟ್‌ಗೆ ಮೂವರು ಎಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಾಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಕಡಬ ಭರತರಾಜ ಶೆಟ್ಟಿ, ಬೊರಕಟ್ಟೆ ಮುರಳೀಧರ ಪೈ ಮತ್ತು ತ್ಯಾಗರಾಜ ನಾರಾಯಣ ಇನವಳ್ಳಿ ಅವರಿಗೆ ಪದೋನ್ನತಿ ನೀಡಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಟ್ಬಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿಜೆಐ ಬಿ.ಆರ್.ಗವಾಯಿ ಅಧ್ಯಕ್ಷತೆಯಲ್ಲಿನಡೆದ ಕೊಲಿಜಿಯಂ ಸಭೆಯಲ್ಲಿಈ ಮೂವರು ಹಿರಿಯ […]