ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ -ತುರ್ತು ಆರೈಕೆ ತರಬೇತಿ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ(ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ(ಸಿಪಿಆರ್) ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಮಾತನಾಡಿ, ಯುವಜನತೆಯಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಒತ್ತಡವೇ ಮುಖ್ಯ […]

ಬೆಂಕಿ ಅವಘಡ: ಬಾಲನಟ ವೀರ್ ಶರ್ಮಾ ಹಾಗೂ ಸಹೋದರ ಮೃತ್ಯು.

ಜೈಪುರ: ಬೆಂಕಿ ಅವಘಡ ಸಂಭವಿಸಿ ಖ್ಯಾತ ಬಾಲನಟ, ಅವರ ಸಹೋದರ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.ಸೋನಿ ಸಬ್‌ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ ಶ್ರೀಮದ್ ರಾಮಾಯಣದಲ್ಲಿ ಪುಷ್ಕಲ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ವೀರ್‌ ಶರ್ಮಾ (10) ಮತ್ತು ಸಹೋದರ ಶೋರಿಯಾ ಶರ್ಮಾ (16) ಮೃತಪಟ್ಟಿದ್ದಾರೆ. ಬಹು ಮಹಡಿಯ ಕಟ್ಟಡದಲ್ಲಿ ಭಾನುವಾರ ಬೆಳಗಿನ ಜಾವ 2 ಗಂಟೆಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಘಟನೆ ನಡೆದ ಸಂದರ್ಭದಲ್ಲಿ […]

RBI ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ಬಳಿಕ ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್‌ಬಿಐ ನಾಲ್ಕು ಉಪಗವರ್ನರ್‌ಗಳನ್ನು ಹೊಂದಿದ್ದು, ಪ್ರತಿಯೊಬ್ಬರೂ ಹಣಕಾಸು ನೀತಿ, ಬ್ಯಾಂಕಿಂಗ್ ಮೇಲ್ವಿಚಾರಣೆ ಮತ್ತು ಹಣಕಾಸು ಮಾರುಕಟ್ಟೆಗಳ […]

ಉಡುಪಿ: ಹಿಂದಿ ಹೇರಿಕೆ ವಿರೋಧಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜಾಭಾಷಾ ಆಯೋಗ- ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, […]

ಎಕೆಎಂಎಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ; ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ‌ ಇಂದು ಹಾಜರುಪಡಿಸಲಾಯಿತು. ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂಬವರನ್ನು ಪೊಲೀಸರು‌ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗಳನ್ನು ಅ. 4ವರೆಗೆ ಪೊಲೀಸ್ ಕಸ್ಟಡಿ ನೀಡಿ ನ್ಯಾಯಾಲಯ ಆದೇಶ ನೀಡಿದೆ.ಸೈಫುದ್ದೀನ್ ಹತ್ಯೆಯ ಹಿಂದೆ ದುಬೈಯ ಉದ್ಯಮಿ […]