ಉಡುಪಿ ಉಚ್ಚಿಲ ದಸರಾ: ಮುದ್ದು ಶಾರದೆಯರ ಕಲರವ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ನಾಲ್ಕನೇ ವರ್ಷದ ಉಡುಪಿ ಉಚ್ಚಿಲ ದಸರಾ 2025ರ 5ನೇ ದಿನವಾದ ಶುಕ್ರವಾರ ಮಕ್ಕಳಿಗಾಗಿ ನಡೆದ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ‘ಮುದ್ದು ಶಾರದೆ’ಯರ ಕಲರವ ಎದ್ದು ಕಾಣುತ್ತಿತ್ತು.3 ವರ್ಷದಿಂದ 9 ವರ್ಷ ವಯಸ್ಸಿನ ಮಕ್ಕಳಿಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ನೂರಾರು ಸ್ಪರ್ಧಿಗಳು ಭಾಗವಹಿಸಿದ್ದರು. ಮುದ್ದು ಶಾರದೆಯರನ್ನು ಕಣ್ತುಂಬಿಕೊಳ್ಳಲು ಹೆತ್ತವರ ಜೊತೆಗೆ ಸಾರ್ವಜನಿಕರು ಕಾತುರರಾಗಿದ್ದರು. ಅನ್ವಿ ನಾಯಕ್ ಬ್ರಹ್ಮಾವರ ಪ್ರಥಮ, […]

ಕರೂರಿನಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್.

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಿನ್ನೆ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಲಿಯಾದ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿನ ಪೋಸ್ಟ್‌ನಲ್ಲಿ, ‘ತಾನು ದುಃಖದಿಂದ ಮುಳುಗಿದ್ದೇನೆ. ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಾಲುತ್ತಿಲ್ಲ. ನನ್ನ ಕಣ್ಣುಗಳು […]

ಬೆಂಗಳೂರು: ದರೋಡೆಕೋರರನ್ನು ಬರೀ 15 ನಿಮಿಷದಲ್ಲೇ ಹಿಡಿದ ಪೊಲೀಸರು!

ಬೆಂಗಳೂರು: ದಂಪತಿ ಮತ್ತು ಅಡಿಕೆ ವ್ಯಾಪಾರಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ 1.10 ಕೋಟಿ ರೂ. ನಗದು ದೋಚಿದ್ದ ದರೋಡೆಕೋರರನ್ನು ಘಟನೆ ನಡೆದ ಕೆಲವೇ ಸಮಯದಲ್ಲಿ ಬಂಧಿಸುವಲ್ಲಿ ಹುಳಿಮಾವು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನರಸಿಂಹ(30), ಜೀವನ್(28), ಕುಮಾರ್(33), ವೆಂಕಟರಾಜು(32), ಕಿಶೋರ್(32), ನಮನ್(19), ರವಿಕಿರಣ್(30), ಚಂದ್ರು(34) ಬಂಧಿತರು. ಆರೋಪಿಗಳು ಜಿಗಣಿ, ಬೇಗೂರು ಮತ್ತು ಚಂದಾಪುರ ನಿವಾಸಿಗಳಾಗಿದ್ದಾರೆ. ಬಹುತೇಕರು ಸೆಕ್ಯೂರಿಟಿ ಗಾರ್ಡ್ ಕೆಲಸದ ಜತೆಗೆ ಸ್ವಿಗ್ಗಿ ಡೆಲಿವರಿ ಬಾಯ್‌ಗಳಾಗಿ ಹಾಗೂ ಇತರೆ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದಾರೆ. ಈ ಪೈಕಿ ಆರೋಪಿಗಳಾದ ವೆಂಕಟರಾಜು […]

ಬಿಸಿ ಹಾಲಿನ ಪಾತ್ರೆಗೆ ಬಿದ್ದ ಮಗು ಸಾವು: ಶಾಲೆಯಲ್ಲಿ ನಡೆದ ಭೀಕರ ಘಟನೆ

ಅನಂತಪುರಂ: ಶಾಲೆಯ ಅಡುಗೆ ಮನೆಯಲ್ಲಿ ಇರಿಸಲಾಗಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಒಂದೂವರೆ ವರ್ಷದ ಬಾಲಕಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಮಗು 17 ತಿಂಗಳ ಪುಟ್ಟ ಮಗು ಅಕ್ಷಿತಾ. ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೂಲಗಳ ಪ್ರಕಾರ ಶಾಲೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ತನ್ನ ತಾಯಿಯೊಂದಿಗೆ ಮಗು ಇತ್ತು. ಆದರೆ ತಾಯಿಯ […]

‘ತಾಸೆಯ ಪೆಟ್ಟಿಗೆ’ ಹೆಣ್ಣು ಹುಲಿ ಕುಣಿತ

ಪಡುಬಿದ್ರಿ: ‘ತಾಸೆಯ ಪೆಟ್ಟಿಗೆ’ ಹೆಣ್ಣು ಮಕ್ಕಳ ಹುಲಿ ಕುಣಿತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.ಉಚ್ಚಿಲದ ಶ್ರೀಮಹಾಲಕ್ಷ್ಮಿ ದೇವಸ್ಥಾನ ಸಭಾಂಗಣದಲ್ಲಿ ಉಚ್ಚಿಲ ದಸರಾ ಪ್ರಯುಕ್ತ ಉಡಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ, ಶನಿವಾರ ನಡೆದ ‘ಹೆಣ್ಣು ಹುಲಿ ನೃತ್ಯ ಸ್ಪರ್ಧೆ’ಯಲ್ಲಿ 20 ತಂಡಗಳು ಭಾಗವಹಿಸಿದ್ದವು. 5 ವರ್ಷದ ಪುಟಾಣಿಯಿಂದ ಹಿಡಿದು 60 ವರ್ಷ ವಯಸ್ಸಿನೊಳಗಿನ ಮಹಿಳೆಯರು ಸ್ಪರ್ಧೆಯಲ್ಲಿ ಪಾಲ್ಗೊಂಡರು. ವಿವಿಧ ರೀತಿಯ ಹುಲಿ ನೃತ್ಯಗಳು, ಅಕ್ಕಿಮುಡಿ ಎಸೆತ, ನೃತ್ಯದಲ್ಲಿ ವಿವಿಧ ಕಸರತ್ತು ಮಾಡುವ ಮೂಲಕ ಗಂಡು ಹುಲಿ ವೇಷಧಾರಿಗಳಿಗೆ ಸವಾಲೊಡ್ಡುವಂತಿತ್ತು. […]