ಜಾನುವಾರುಗಳಿಗೆ ಐಬಿಆರ್ ಲಸಿಕೆ: ಭಾರತದಲ್ಲಿ ಮೊದಲ ಪ್ರಯೋಗ

ಹೈದರಾಬಾದ್: ಹೈದರಾಬಾದ್ನ ಲಸಿಕೆ ತಯಾರಿಕಾ ಕಂಪನಿ ‘ಇಂಡಿಯನ್ ಇಮ್ಯುನೊಲಾಜಿಕಲ್ಸ್ ಲಿಮಿಟೆಡ್’ (ಐಐಎಲ್) ಸೋಂಕಿತ ಜಾನುವಾರುಗಳ ಮೂಗು ಮತ್ತು ಗಂಟಲಿನ ಉರಿಯೂತ (ಐಬಿಆರ್) ಕಾಯಿಲೆಗೆ ಭಾರತದ ಮೊದಲ ಲಸಿಕೆ ‘ಜೀನ್ ಡಿಲೀಟೆಡ್ ದಿವಾ’ ಅಭಿವೃದ್ಧಿಪಡಿಸಿ ಸೋಮವಾರ ಬಿಡುಗಡೆ ಮಾಡಿದೆ. ಈ ಲಸಿಕೆಯು ಸೋಂಕಿತ ಜಾನುವಾರುಗಳಿಂದ ಇತರ ಜಾನುವಾರುಗಳನ್ನು ರಕ್ಷಿಸುತ್ತದೆ. ಭಾರತದಲ್ಲಿ ಐಬಿಆರ್ ಸಾಂಕ್ರಾಮಿಕ ರೋಗವಾಗಿದ್ದು, ಗಾಳಿಯ ಮೂಲಕ ಹರಡುತ್ತದೆ ಮತ್ತು ಜಾನುವಾರುಗಳ ಸಂತಾನೋತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಜಾನುವಾರುಗಳಲ್ಲಿ ಬಂಜೆತನ, ಕಡಿಮೆ ಹಾಲು ಉತ್ಪಾದನೆ, ಗರ್ಭಪಾತಕ್ಕೂ ಕಾರಣವಾಗುತ್ತದೆ. ಭಾರತದಲ್ಲಿ […]
ರಾಜ್ಯ ಸರಕಾರದ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು; ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ. ಖಾಲಿ ಹುದ್ದೆಗಳ ಭರ್ತಿ, ನೇಮಕಾತಿಯ ವಯೋಮಿತಿ ಹೆಚ್ಚಳ ಮತ್ತು ಕೆಎಎಸ್ ಅಧಿಸೂಚನೆಯಲ್ಲಿ ಕಂಡುಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ ಅಧಿಸೂಚನೆ ರದ್ದುಪಡಿಸಲು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು […]
ಚೀನಾದಲ್ಲಿ ಉದ್ಘಾಟನೆಯಾಯ್ತು ಅತೀ ಎತ್ತರದ ಸೇತುವೆ!

ಬೀಜಿಂಗ್: ಚೀನಾದ ಬೈಪಾನ್ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ಸೇತುವೆ ಹುವಜಿಯಾಂಗ್ ಗ್ರ್ಯಾಂಡ್ ಕ್ಯಾನ್ಯೋನ್ ಸೇತುವೆ ಇದೀಗ ಸಂಚಾರಕ್ಕೆ ಮುಕ್ತವಾಗಿದೆ. ಬೈಪಾನ್ ನದಿಯ ಮೇಲೆ 625 ಮೀಟರ್ ಎತ್ತರದಲ್ಲಿ ನಿರ್ಮಾಣಗೊಂಡಿರುವ ಸೇತುವೆಯು ಕಣಿವೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಎರಡು ಗಂಟೆಗಳ ಪ್ರಯಾಣವನ್ನು ಕೇವಲ 2 ನಿಮಿಷಕ್ಕೆ ಇಳಿಸಿದೆ. ಸುಮಾರು ಮೂರೂವರೆ ವರ್ಷಗಳಲ್ಲಿ ನಿರ್ಮಾಣಗೊಂಡಿರುವ ಸೇತುವೆಯು 2,890 ಮೀಟರ್ ಉದ್ದವಿದ್ದು ಇದರ ಮುಖ್ಯ ಕಮಾನು 1,420 ಮೀಟರ್ ಎತ್ತರವಿದೆ ಇದು ಸೆಪ್ಟೆಂಬರ್ 28ರಿಂದ ಸಂಚಾರಕ್ಕೆ […]
ಕಂದಾಯ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: ಕಾಗದರಹಿತ ನೋಂದಣಿ ಶುರು ಮಾಡಿದ ಹರಿಯಾಣ

ಕುರುಕ್ಷೇತ್ರ: ರಾಜ್ಯದಲ್ಲಿ ಕಾಗದರಹಿತ ನೋಂದಣಿ ವ್ಯವಸ್ಥೆ ಜಾರಿಗೆ ತಂದಿದ್ದು, ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತೊಡೆದುಹಾಕಲು ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ.ಮಾನವ ಹಸ್ತಕ್ಷೇಪವನ್ನು ಕಡಿಮೆ ಮಾಡುವ ಮೂಲಕ, ವಾಸ್ತವಿಕವಾಗಿ ದುಷ್ಕೃತ್ಯದ ಅವಕಾಶಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಅವರು ಹೇಳಿದರು. ನೋಂದಣಿ ಕಾರ್ಯವು ಈಗ ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ. ಇದು ಸರ್ಕಾರದ ‘ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ’ ನೀತಿಯ ಉದಾಹರಣೆಯಾಗಿದೆ ಎಂದಿದ್ದಾರೆ. ಕಾಗದದ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಈ ಉಪಕ್ರಮವು […]
ಬಾಲಕಿಯನ್ನು ಗರ್ಭಿಣಿ ಮಾಡಿ ಮದುವೆಯಾಗಲ್ಲ ಎಂದ ಪ್ರಿಯಕರ: ಕತ್ತು ಸೀಳಿ ಪ್ರಿಯಕರನ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ!

ಮೂರು ತಿಂಗಳು ಗರ್ಭಿಣಿ ಮಾಡಿ ಮದುವೆಯಾಗಲ್ಲ ಎಂದ ಪ್ರಿಯಕರನನ್ನು 16 ವರ್ಷದ ಬಾಲಕಿಯೊಬ್ಬಳು ಚಾಕುವಿನಿಂದ ಲಾಡ್ಜ್ವೊಂದರಲ್ಲಿ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿದೆ. ಅಪ್ರಾಪ್ರ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಂಗಳವಾರ (ಸೆ. 30) ವರದಿಯಾಗಿದೆ. ಬಿಹಾರ ಮೂಲದ ಮೊಹಮ್ಮದ್ ಸದ್ದಾಂ ಕೊಲೆಯಾದ ಪ್ರಿಯಕರ. ಅಭನ್ಪುರದಲ್ಲಿ ಎಂಎಸ್ ಎಂಜಿನಿಯರಿಂಗ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಅಪ್ರಾಪ್ತ ಬಾಲಕಿ ಬಿಲಾಸ್ಪುರದ ಕೋನಿ ಠಾಣಾ ವ್ಯಾಪ್ತಿಯ ನಿವಾಸಿ. ಸೆ. 28ರಂದು ಗೆಳೆಯನನ್ನು ನೋಡಲಯ […]