ಉಡುಪಿ:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್ ಗಳಲ್ಲಿಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು […]
ಉಚ್ಚಿಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಉಡುಪಿ: ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು […]
ಉಡುಪಿ:ಹವಾಮಾನ ಇಲಾಖೆ ಮುನ್ಸೂಚನೆಯುಂತೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ

ಉಡುಪಿ:ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಿದೆ. ತುರ್ತು ಸೇವೆಗೆ ಶುಲ್ಕ ರಹಿತ 1077, […]
ಉಡುಪಿ:ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಘಟಕಗಳನ್ನು ಕೂಡಲೇ ಸ್ಥಾಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಟಿ.ಕೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ […]