ಉಡುಪಿ:ಅ.3 ರಂದು ಶಾರದೋತ್ಸವ ವಿಸರ್ಜನಾ ಮೆರವಣಿಗೆ – ಮದ್ಯ ಮಾರಾಟ ನಿಷೇಧ

ಉಡುಪಿ: ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 3 ರಂದು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇವಾ ಸಂಘ(ರಿ) ಗಂಗೊಳ್ಳಿ ರವರ ವತಿಯಿಂದ 51 ನೇ ವರ್ಷದ ಶಾರದೋತ್ಸವ ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಸದ್ದಿ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದು, ಪ್ರಮುಖ ಕೋಮು ಸೂಕ್ಷ್ಮ ಸ್ಥಳಗಳ ಮೂಲಕ ಮೆರವಣಿಗೆಯು ಹಾದು ಹೋಗಲಿರುವ ಹಿನ್ನೆಲೆ, ಸದರಿ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು […]
ಉಡುಪಿ:ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ […]
ಖಂಬದಕೋಣೆ; ಸೇತುವೆಗೆ ಡಿಕ್ಕಿ ಹೊಡೆದ ಕಂಟೈನರ್; ತಪ್ಪಿದ ಬಾರಿ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್‌ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು, ಕಂಟೈನರ್‌ನಲ್ಲಿದ್ದ ಚಾಲಕ ಹಾಗೂ ಕೀನರ್ ಅಪಾಯದಿಂದ ಪಾರಾಗಿದ್ದಾರೆ.
ವಿಜಯದ ಸಂಕೇತ ದಸರಾ ಹಬ್ಬ: ನವರಾತ್ರಿಯ ಒಂದಷ್ಟು ವಿಶೇಷಗಳನ್ನು ತಿಳಿದುಕೊಳ್ಳಿ: ದಸರಾ ವಿಶೇಷ ಬರಹ

‘ದಸರಾ’ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ. ಇದು ಮೂರೂವರೆ ಮುಹೂರ್ತಗಳಲ್ಲಿ ಒಂದಾಗಿದೆ. ‘ಆಶ್ವಯುಜ ಶುಕ್ಲ […]
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಪದವಿ ಕೋರ್ಸ್‌ಗಳ ಸೆಮಿಸ್ಟರ್ ಅವಧಿ ಒಂದು ತಿಂಗಳು ವಿಸ್ತರಣೆ; ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿರುವ ಕಾರಣದಿಂದಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಸೆಮಿಸ್ಟರ್ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳ (ತಾಂತ್ರಿಕ ಶಿಕ್ಷಣ ಹೊರತುಪಡಿಸಿ) ಒಂದು, ಮೂರು ಮತ್ತು ಐದನೇ ಸೆಮಿಸ್ಟರ್‌ಗಳಿಗೆ ಈ ಆದೇಶ ಅನ್ವಯವಾಗಲಿದ್ದು, ವಿವಿಧ ವಿಶ್ವವಿದ್ಯಾಲಯಗಳು ಮೊದಲು ಪ್ರಕಟಿಸಿದ್ದ ಶೈಕ್ಷಣಿಕ ವೇಳಾಪಟ್ಟಿಯ ಅಂತಿಮ ದಿನಕ್ಕೆ ಅನ್ವಯಿಸಿ, ವಿಸ್ತರಣೆಯ […]